ಅಯ್ಯನಕಟ್ಟೆ ಶ್ರೀ ದೈವಸ್ಥಾನದಲ್ಲಿ ಪ್ರತಿಷ್ಠೆ ಕಲಶಾಭಿಷೇಕ

January 28, 2020
11:17 AM

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠೆ ನಡೆಯಿತು.
ಜ. 27ರಂದು ಮೂರುಕಲ್ಲಡ್ಕದಲ್ಲಿ ಪೂ.9.50ರ ಮೀನ ಲಗ್ನದ ಮುಹೂರ್ತದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಠೆ ನಡೆಯಿತು. ಕಲ್ಲಮಾಡದ ಶುದ್ಧಿ ಕಲಶ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು‌.

ದೈವಸ್ಥಾನದಲ್ಲಿ 30ರವರೆಗೆ ಅಯ್ಯನಕಟ್ಟೆ ಜಾತ್ರೆ ನಡೆಯಲಿದೆ. ಜ. 28ರಂದು ಬೆಳಗಿನ ಜಾವ 5.00ಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಿಗ್ಗೆ 7 ಕ್ಕೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀಮುಡಿ ದೈವಗಳ ನೇಮ, ಗಂಧಪ್ರಸಾದ ವಿತರಣೆ ನಡೆಯಿತು‌.

ಜ. 26ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಬೆಳಗ್ಗೆ 8 ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬೆಳಗ್ಗೆ 8.30ಕ್ಕೆ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ ಬೆಳಗ್ಗೆ 10ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2.00ರಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಲಿದೆ. ಜ. 30ರಂದು ಬೆಳಗ್ಗೆ 10ಗಂಟೆಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ 5ಕ್ಕೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror