ಅರಂಬೂರಿನಲ್ಲಿ ಭೀಕರ ಅಪಘಾತ : ಬಸ್ಸು – ಕಾರು ಡಿಕ್ಕಿಯಾಗಿ 3 ಮಂದಿ ಸಾವು

July 14, 2019
1:45 PM

ಸುಳ್ಯ: ಸುಳ್ಯ ಸಮೀಪದ ಅರಂಬೂರಿನಲ್ಲಿ ಭಾನುವಾರ ಬೆಳಗ್ಗೆ  ಕಾರು ಹಾಗೂ ಬಸ್ಸು ಡಿಕ್ಕಿಯಾಗಿ 3 ಮಂದಿ ಸಾವನ್ನಪ್ಪಿದ್ದಾರೆ.

ಸುಳ್ಯದ ಅರಂಬೂರು ಬಳಿ ರಿಕ್ಷಾವನ್ನು ಹಿಂದಿಕ್ಕುವ  ಯತ್ನದಲ್ಲಿದ್ದ ಕಾರು ಹಾಗೂ ಬಸ್ಸು ಢಿಕ್ಕಿಯಾಗಿದೆ. ಕಾರಿನಲ್ಲಿದ್ದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ  ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರು. ಗಂಭೀರ ಗಾಯಗೊಂಡಿದ್ದ ಸೋಮಣ್ಣ ಮತ್ತು ನಾಗೇಂದ್ರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸು ಹಾಗೂ  ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿದೆ. ಮೃತರೆಲ್ಲರೂ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆಯವರು. ಕಾರಿನಲ್ಲಿ  12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಅವರಿಗೆ ಗಾಯವಾಗಿದೆ. ಅಪಘಾತವಾದ ತಕ್ಷಣ ಸ್ಥಳೀಯರು ಸರಕಾರಿ ಆಸ್ಪತ್ರೆಗೆ ಕರೆತಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror