ಅರಂಬೂರು ಸೇತುವೆ ಕಾಮಗಾರಿ ಆರಂಭಿಸಿ 3 ವರ್ಷ….! ಅಧಿಕಾರಿಗಳೇ…ಶಾಸಕರೇ…..ಸ್ವಲ್ಪ ಈ ಕಡೆ ಗಮನಿಸಿದರೆ ಬೆಸ್ಟ್…..

September 22, 2019
5:00 PM

ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ,  ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ.  ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror