ಮಂಗಳೂರು: ಒಂದು ವಾರಗಳಿಂದ ಕರಾವಳಿ ಜಿಲ್ಲೆಯಲ್ಲಿ ಮಳೆಗೆ ವಿರಾಮವಿತ್ತು. ಇದೀಗ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಂಡುಬಂದಿದೆ. ಹೀಗಾಗಿ ಮುಂದಿನ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಎಲರ್ಟ್ ಘೋಷಣೆ ಮಾಡಬಹುದಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ರಾಜ್ಯದ ವಿವಿದೆಡೆ ಸಾಧಾರಣ ಮಳೆಯಾಗಲಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಡಿಮೆಯಾಗದೇ ಇದ್ದರೆ ಚಂಡಮಾರುತದ ಲಕ್ಷಣಗಳು ಕಾಣಿಸಬಹುದಾಗಿದೆ. ಎರಡು ದಿನಗಳ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ.

ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel