ಅರೆಕಲ್ಲಿನಲ್ಲಿ ಗ್ರಾಮೀಣ ಕ್ರೀಡಾಕೂಟ

August 26, 2019
2:12 PM

ಸಂಪಾಜೆ: ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ತಾಲೂಕು ಯುವ ಒಕ್ಕೂಟ ಮಡಿಕೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಮತ್ತು ವನಶ್ರೀ ಯುವಕ ಮಂಡಲಅರೇಕಲ್ಲು ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಕ್ರೀಡಾಕೂಟ ಮತ್ತು 19 ನೆ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಅರೆಕಲ್ಲಿನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮೊಸರು ಕುಡಿಕೆ ಮತ್ತು ರಿಂಗ್ ಎಸೆತ ಹಾಗೂ ಪುರುಷರಿಗೆ ಹಗ್ಗಜಗ್ಗಾಟ ಏರ್ಪಡಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವನಶ್ರೀ ಯುವಕ ಮಂಡಲದ ಅಧ್ಯಕ್ಷ ರಂಜಿತ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಕುಮಾರ್ ಚೆದ್ಕಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಕಾರ್ಯಕರ್ತೆ ಪುಷ್ಪಾವತಿ, ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ, ಶ್ರೀ ಚರಣ್ ಬಿ.ಜೆ ಮತ್ತು ಉಪಸ್ಥಿತರಿದ್ದರು.

ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಅರೇಂಜ್ ಫ್ರೆಂಡ್ಸ್ ಮರ್ಕಂಜ, ಧ್ವಿತೀಯ ಸ್ಥಾನವನ್ನು ಪತಂಜಲಿ ಮಿತ್ರ ಬಳಗ ಸಂಪಾಜೆ ಪಡೆಯಿತು. ಕಾರ್ಯಕ್ರಮದಲ್ಲಿ ತಿಲಕ್ ಕುಲಾಲ್ ಸ್ಚಾಗತಿಸಿ, ಲಕ್ಷ್ಮಣ ಆಚಾರ್ಯ ವಂದಿಸಿದರು‌. ಉದಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ
ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror