ಆ.27 ರಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ

August 25, 2019
8:54 PM

ಸುಳ್ಯ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಆ.27 ರಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಬೆಳಿಗ್ಗೆ 10 ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

Advertisement

ನಿರ್ಗಮನ ಬಿಜೆಪಿ ಅಧ್ಯಕ್ಷ ಮುಖ್ಯಮಂತ್ರಿ ಬಿ‌.ಯಸ್.ಯಡಿಯೂರಪ್ಪ ಅವರಿಂದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸುವರು.
ಸುಳ್ಯ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಬಿಜೆಪಿ ಕಾರ್ಯಕರ್ತರು, ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಮಿಂಚಿನ ಸಂಚಾರ ಉಂಟಾಗಿದ್ದು ಉತ್ಸಾಹ ಹೆಚ್ಚಿದೆ. ಆದುದರಿಂದ ಗ್ರಾಮ ಗ್ರಾಮ ಗಳು ಸೇರಿದಂತೆ ಪ್ರತಿ ವಿಧಾನಸಭಾ ಕ್ಷೇತ್ರದಿಂದ ನೂರಾರು ಮಂದಿ ಕಾರ್ಯಕರ್ತರನ್ನು ಕಾರ್ಯಕ್ರಮಕ್ಕೆ ಕರೆದೊಯ್ಯುವ ಪ್ರಯತ್ನವನ್ನು ಬಿಜೆಪಿ ಮಂಡಲ ಸಮಿತಿಗಳು ನಡೆಸುತ್ತಿದೆ. ಅದಕ್ಕಾಗಿನ ಸಿದ್ಧತೆಗಳು ನಡೆದಿದೆ. ಸೋಮವಾರ ರಾತ್ರಿಯೇ ಇಲ್ಲಿನ ಕಾರ್ಯಕರ್ತರು ಬೆಂಗಳೂರಿಗೆ ತೆರಳಲಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ
June 10, 2025
7:23 AM
by: The Rural Mirror ಸುದ್ದಿಜಾಲ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ
May 2, 2025
8:59 PM
by: ದ ರೂರಲ್ ಮಿರರ್.ಕಾಂ
ರೈತರಿಗೆ 400 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಮತ್ತು ಯಂತ್ರೋಪಕರಣ ವಿತರಣೆ
April 22, 2025
6:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group