#ಆತ್ಮನಿರ್ಭರ ಭಾರತದ ಕಡೆಗೆ ಹೆಜ್ಜೆ | ಸುಳ್ಯ ತಾಲೂಕಿನಲ್ಲಿ ತರಕಾರಿ ಬಿತ್ತನೆ ಬೀಜಗಳ ವಿತರಣೆ ಆರಂಭ | ಸ್ವಾವಲಂಬಿ-ಸಾವಯವದ ಚಿಂತನೆ

June 10, 2020
2:30 PM

ಸುಳ್ಯ ತಾಲೂಕಿನಲ್ಲಿ ತರಕಾರಿ ಬೀಜಗಳ ವಿತರಣೆ  ವಿವಿಧ ಸಹಕಾರಿ ಸಂಘಗಳ ಸಹಕಾರದೊಂದಿಗೆ ಗ್ರಾಮ ವಿಕಾಸ ಸಮಿತಿ ಆಶ್ರಯದಲ್ಲಿ  ನಡೆಯುತ್ತಿದೆ. ವಿವಿಧ ಬಗೆಯ ತರಕಾರಿ ಬೀಜಗಳ ವಿತರಣೆ ಮಾಡಲಾಗುತ್ತಿದ್ದು ಆತ್ಮನಿರ್ಭರ ಭಾರತ ಹಾಗೂ ಸ್ವಾವಲಂಬಿ ಗ್ರಾಮದ ಕನಸಿನ ಬೀಜ ಬಿತ್ತಲಾಗುತ್ತಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕ, ಜಾಲ್ಸೂರು, ಕನಕಮಜಲು, ಮಂಡೆಕೋಲು, ಗುತ್ತಿಗಾರು, ಪಂಜ , ಏನೆಕಲ್ಲು, ಕಳಂಜ-ಬಾಳಿಲ,  ಮೊದಲಾದ ಕಡೆಗಳಲ್ಲಿ ತರಕಾರಿ ಬೀಜ ವಿತರಣೆ ನಡೆಯುತ್ತಿದೆ.

Advertisement

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ , ಕುಕ್ಕುಜಡ್ಕಮತ್ತು ಗ್ರಾಮ ವಿಕಾಸ ಸಮಿತಿ ಅಮರಮುಡ್ನೂರು-ಪಡ್ನೂರು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಅಮರ ಸಹಕಾರ ಸಭಾಭವನದಲ್ಲಿ ಜರುಗಿತು.

ಹರಿಶ್ಚಂದ್ರ ಗೌಡ ಮೊಂಟಡ್ಕ ಗ್ರಾಮ ವಿಕಾಸ ಸಮಿತಿ ಅಮರಮುಡ್ನೂರು ಇವರು ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಭಾಗ ಗ್ರಾಮ ವಿಕಾಸ ಸಂಯೋಜಕ ಪ್ರವೀಣ್ ಸರಳಾಯ,ತರಕಾರಿ ಬೀಜ ವಿತರಣೆಯ ಕುರಿತು ರೈತರಿಗೆ ಮಾಹಿತಿ ನೀಡಿದರು. ಸಾವಯವ ಬದುಕಿನ ಜೊತೆ ವಿಷಮುಕ್ತ ಬದುಕು ನಮ್ಮದಾಗಬೇಕು, ಅಲ್ಲದೆ ತರಕಾರಿ ಬೆಳೆಯ ಮೂಲಕ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಬೇಕಾಗಿದೆ ಎಂದರು.

ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಸೀತಾ ಹೆಚ್ ,ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಘವೇಂದ್ರ ಪಿ. ಕೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಕುಮಾರ್ ಪೊಯ್ಯೆಮಜಲು, ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿದರು. ಗಣೇಶ್ ಪಿಲಿಕಜೆ ಕಾರ್ಯಕ್ರಮ ನಿರೂಪಿಸಿದರು.

ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಗ್ರಾಮದ ರೈತರು ತರಕಾರಿ ಬಿತ್ತನೆ ಬೀಜಗಳನ್ನು ಪಡೆದುಕೊಂಡರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group