ಆದಿವಾಸಿಗಳನ್ನು ಅರಣ್ಯದಿಂದ ಹೊರ ಹಾಕುವ ಸಂಚು: ಬುಡಕಟ್ಟು ಕೃಷಿಕರ ಸಂಘ ಆರೋಪ: ಮಡಿಕೇರಿಯಲ್ಲಿ ಪ್ರತಿಭಟನೆ

November 18, 2019
7:23 PM

ಮಡಿಕೇರಿ: ಆದಿವಾಸಿಗಳನ್ನು ಅರಣ್ಯ ಪ್ರದೇಶದಿಂದ ಹೊರ ಹಾಕಲು ಸರಕಾರದಿಂದ ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ ಎಂದು ಆರೋಪಿಸಿ ನಾಗರಹೊಳೆ, ವಿರಾಜಪೇಟೆ ತಾಲೂಕಿನ ಬುಡಕಟ್ಟು ಕೃಷಿಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement
Advertisement
Advertisement

ಫೀ.ಮಾ.ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ಸರಕಾರ ಮತ್ತು ಅರಣ್ಯಾಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಆದಿವಾಸಿಗಳು ವಾಸಿಸುವ ಹಾಡಿಗಳಲ್ಲಿ ಹಾಗೂ ಗ್ರಾಮಗಳಲ್ಲಿ ಅವರ ಸಾಂಪ್ರದಾಯಿಕ ಗಡಿಗನುಸಾರ ಗ್ರಾಮಸಭೆಯ ನಿರ್ಣಯದ ಪ್ರಕಾರ ಸರ್ವೇ ನಡೆಸಿ ಸಮುದಾಯದ ಹಕ್ಕನ್ನು ಡಿ. 31 ರೊಳಗೆ ನೀಡಬೇಕು ಹಾಗೂ ವೈಯುಕ್ತಿಕ ಹಕ್ಕುಗಳನ್ನು ಕೂಡ ನೀಡಬೇಕು. ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಮನ್ನಣೆಯಾದ ಹಕ್ಕು ಪ್ರದೇಶಗಳನ್ನು ತಕ್ಷಣ ರೆವಿನ್ಯು ಗ್ರಾಮಗಳಾಗಿ ಪರಿವರ್ತಿಸಬೇಕು. ಸರಕಾರಿ ಬ್ಯಾಂಕ್, ಸಹಕಾರಿ ಸಂಘಗಳು, ಬೇರೆ ಬೇರೆ ಇಲಾಖೆಗಳ ಸೌಲಭ್ಯವನ್ನು ಪಡೆಯಲು ಆರ್.ಟಿ.ಸಿ ಒದಗಿಸಿಕೊಡಬೇಕು. ಭಾರತ ಅರಣ್ಯ ಕಾಯ್ದೆ 1972 ನ್ನು ಸಂಪೂರ್ಣ ರದ್ದುಗೊಳಿಸಬೇಕು. ಅರಣ್ಯ ವಾಸಿಗಳಿರುವ ಹಾಡಿಗಳಲ್ಲಿ, ಗ್ರಾಮಗಳಲ್ಲಿ ಮನುಷ್ಯರಿಗೂ, ಪ್ರಾಣಿಗಳಿಗೂ ಅನುಕೂಲವಾಗುವ ಗಿಡಮರಗಳನ್ನು ನೆಟ್ಟು ಬೆಳೆಸಬೇಕು. ಬೆಟ್ಟ ಕುರುಬ ಸಮುದಾಯಕ್ಕೆ ಬೆಟ್ಟ ಕುರುಬ ಎಂಬ ಜಾತಿ ಪ್ರಮಾಣ ಪತ್ರ ನೀಡಬೇಕು. ಹುಲಿ ಸಂರಕ್ಷಣಾ ಪ್ರದೇಶ, ಆನೆ ಕಾರಿಡಾರ್ ಎಂದು ಹೇಳಿ ಬುಡಕಟ್ಟು ಸಮುದಾಯವನ್ನು ಎತ್ತಂಗಡಿ ಮಾಡುವ ಪ್ರಯತ್ನಗಳನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Advertisement

ಈ ಸಂದರ್ಭ ಮಾತನಾಡಿದ ಸೋಮವಾರಪೇಟೆ ತಾಲೂಕು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಆರ್.ಕೆ.ಚಂದ್ರು, ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬುವ ಪ್ರಯತ್ನ ನಡೆಯುತ್ತಿದೆ. ನಾವು ಹೊರದೇಶದಿಂದ ಬಂದವರಲ್ಲ, ನೂರಾರು ವರ್ಷದಿಂದ ಅರಣ್ಯದಲ್ಲಿಯೇ ಹುಟ್ಟಿ ಬೆಳೆದು ಜೀವನ ಸಾಗಿಸುತ್ತಿದ್ದು ನಮ್ಮನ್ನು ಎತ್ತಂಗಡಿ ಮಾಡಲು ಪ್ರಯತ್ನಿಸಿರುವುದು ಸರಿಯಲ್ಲ. ನಮಗೆ ಅರಣ್ಯದಲ್ಲಿಯೇ ವಾಸಿಸಲು ಸರ್ಕಾರ ಅನುವು ಮಾಡಿಕೊಡಬೇಕು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದರು. ಸಂಘದ ಪದಾಧಿಕಾರಿಗಳಾದ ಸೋಮಯ್ಯ, ಪ್ರಕಾಶ್, ಜೆ.ಕೆ.ತಿಮ್ಮ, ರಾಮು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror