ಆಧಾರ್ ನೋಂದಣಿ ಅಭಿಯಾನಕ್ಕೆ ಚಾಲನೆ : ಮೂರು ತಾಲೂಕಿನ 167 ಹಾಡಿಗಳ ಆದಿವಾಸಿಗಳಿಗೆ ಆಧಾರ್ ಭಾಗ್ಯ

July 16, 2019
9:00 AM

ಮಡಿಕೇರಿ: ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಹಾಡಿಯ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಆಧಾರ್ ಗುರುತಿನ ಚೀಟಿ ಕಡ್ಡಾಯವಾಗಿ ಅಗತ್ಯವಿರುವ ಹಿನ್ನೆಲೆ ಪ್ರತಿಯೊಬ್ಬ ಗಿರಿಜನ ಕುಟುಂಬದವರಿಗೆ ಆಧಾರ್ ಗುರುತಿನ ಚೀಟಿ ನೋಂದಾಯಿಸಲು 15 ದಿನಗಳ ಕಾಲ ಮೊಬೈಲ್ ಸಂಚಾರಿ ವಾಹನದ ಮೂಲಕ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಹಾಡಿಗಳಿಗೆ ತೆರಳಿ ಆಧಾರ್ ನೋಂದಣಿ ಮಾಡುವ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೋಮವಾರ ಚಾಲನೆ ನೀಡಿದರು.

Advertisement
Advertisement
Advertisement

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಧಾರ್ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ರಾಜ್ಯದಲ್ಲಿ ಪ್ರಥಮ ಬಾರಿಗೆ ಹಾಡಿಗಳಿಗೆ ತೆರಳಿ ಆಧಾರ್ ನೋಂದಣಿ ಮಾಡಲಾಗುತ್ತಿದೆ. ಜಿಲ್ಲೆಯ ಮೂರು ತಾಲ್ಲೂಕಿನ ಸುಮಾರು 167 ಹಾಡಿಗಳಿಗೆ ಆಧಾರ್ ಕಿಟ್ಟುಗಳನ್ನು ತೆಗೆದುಕೊಂಡು ಹೋಗಿ ನೋಂದಣಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. 

Advertisement

ವಸತಿ ಸೇರಿದಂತೆ ವೈಯಕ್ತಿಕ ಸೌಲಭ್ಯ ಪಡೆಯುವಂತಾಗಲು ಆಧಾರ್ ಕಡ್ಡಾಯವಾಗಿದ್ದು, ಕೆಲವು ಕುಟುಂಬದವರು ಇನ್ನೂ ಆಧಾರ್ ನೋಂದಣಿ ಮಾಡಿಸದೆ ಸರ್ಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಮನಗಂಡು ಹಾಡಿಗಳಿಗೆ ತೆರಳಿ ಆಧಾರ್ ನೋಂದಣಿ ಮಾಡಿಸಲು ಮುಂದಾಗಲಾಗಿದೆ ಎಂದು ಐಟಿಡಿಪಿ ಇಲಾಖೆ ಅಧಿಕಾರಿ ಸಿ.ಶಿವಕುಮಾರ್ ಅವರು ತಿಳಿಸಿದರು.ಜಿಲ್ಲೆಯಲ್ಲಿ ಸುಮಾರು 65 ಸಾವಿರ ಆದಿವಾಸಿ ಜನರಿದ್ದು, ಇವರಿಗೆ ಸರ್ಕಾರದ ವೈಯಕ್ತಿಕ ಸೌಲಭ್ಯಗಳು ಇನ್ನೂ ಮರೀಚಿಕೆಯಾಗಿದೆ. ಎಲ್ಲಾ ಗಿರಿಜನರಿಗೆ ಸೌಲಭ್ಯ ತಲುಪಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆದರೆ ಬಳಸಿಕೊಳ್ಳಲು ಮುಂದೆ ಬಂದರೂ ಸಹ ಆಧಾರ್ ಗುರುತಿನ ಚೀಟಿ ಇಲ್ಲದಿರುವುದು ಕಂಡುಬಂದ ಹಿನ್ನೆಲೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ 15 ದಿನಗಳ ಕಾಲ ತಾಲ್ಲೂಕಿಗೆ ಒಂದರಂತೆ ಮೂರು ಸಂಚಾರಿ ವಾಹನಗಳನ್ನು ನಿಯೋಜಿಸಲಾಗಿದ್ದು, ಸಂಚಾರಿ ವಾಹನದಲ್ಲಿ ಆಧಾರ್ ಕಿಟ್ ಒಳಗೊಂಡ ಸಲಕರಣೆಗಳು ಇರಲಿದ್ದು, ಆಫ್‍ಲೈನ್ ಮೂಲಕ ಆಧಾರ್ ನೋಂದಣಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಆಧಾರ್ ನೋಂದಣಿ ವಿಭಾಗದ ಪ್ರಶಾಂತ್ ಹಾಗೂ ರಾಕೇಶ್ ಅವರು ಮಾಹಿತಿ ನೀಡಿದರು.

Advertisement

ಒಂದು ದಿನಕ್ಕೆ 60 ಜನರಿಗೆ ಆಧಾರ್ ನೋಂದಣಿ ಮಾಡುವ ಗುರಿ ಇದೆ. ಮೂಲ ನಿವಾಸಿ ಗಿರಿಜನರು ಆಧಾರ್ ನೋಂದಣಿ ಮಾಡಿಸಿ ಸೌಲಭ್ಯ ಪಡೆಯಲು ಮುಂದಾಗಬೇಕಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ತಾಲ್ಲೂಕು ಐಟಿಡಿಪಿ ಅಧಿಕಾರಿ ಚಂದ್ರಶೇಖರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಚಿಕ್ಕಬಸವಯ್ಯ, ಶೇಖರ್, ದೇವರಾಜು, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಇತರರು ಹಾಜರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror