ಆನೆ ಹಾವಳಿ ಕುರಿತು ಚರ್ಚಿಸಲು ಸಭೆ

June 21, 2019
2:22 PM

ಸುಳ್ಯ:  ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಪ್ರದೇಶದಲ್ಲಿ ಆನೆ ದಾಳಿಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ದ.ಕ.ಉಸ್ತುವಾರಿ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳಿಗಳ ಸಭೆ ಮಂಗಳೂರಿನಲ್ಲಿ ನಡೆಯಿತು.

ದ.ಕ.ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಮತ್ತು ಎರಡೂ ರಾಜ್ಯಗಳ ಅರಣ್ಯ ಇಲಾಖೆ ಮತ್ತಿತರ ಅಧಿಕಾರಿಗಳು ಭಾಗವಹಸಿದ್ದರು.
ಸುಳ್ಯ ತಾಲೂಕಿನ ಮತ್ತು ಕಾಸರಗೋಡು ಜಿಲ್ಲೆಯ ಗಡಿ ಪ್ರದೇಶದಲ್ಲಿ ಹಲವು ವರ್ಷಗಳಿಂದ ಆನೆಗಳ ಹಾವಳಿ ಅಧಿಕವಾಗಿದ್ದು ಜನರು ರೋಸಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ ವಿಶೇಷ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಸಭೆ ನಡೆಸಲಾಯಿತು.‌ 11 ಆನೆಗಳ ಹಿಂಡು ಗಡಿಪ್ರದೇಶದಲ್ಲಿ ದಾಂಧಲೆ ನಡೆಸುತ್ತಿದ್ದು ಎರಡೂ ರಾಜ್ಯಗಳಿಗೆ ತಲೆ ನೋವು ಸೃಷ್ಟಿಸಿದೆ. ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror