ಮಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ಐ.ಸಿ.ಐ.ಸಿ.ಐ. ಅಕಾಡೆಮಿ ಫಾರ್ ಸ್ಕಿಲ್ಸ್, ಫೌಂಡೇಶನ್ ಬೆಂಗಳೂರು ಸಂಸ್ಥೆಯು ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಅತ್ಯಂತ ಬೇಡಿಕೆಯಲ್ಲಿರುವ ಆಫೀಸ್ ಅಡ್ಮಿನಿಸ್ಟ್ರೇಷನ್ ಮತ್ತು ರಿಟೈಲ್ ಸೇಲ್ಸ್ ಕೋರ್ಸ್‍ಗಳಿಗೆ ಉಚಿತ ತರಬೇತಿ ನೀಡುತ್ತಿದೆ.
10ನೇ ತರಗತಿ ಪಾಸಾಗಿರುವ, ಪಿ.ಯು.ಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ, 18 ರಿಂದ 30 ವರ್ಷ ವಯಸ್ಸಿನ ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಈ ಕೋರ್ಸ್‍ಗೆ ಅರ್ಜಿ ಸಲ್ಲಿಸಬಹುದು.
ಈ ಕೋರ್ಸ್ 03 ತಿಂಗಳ ಅವಧಿಯಾಗಿದ್ದು, ತರಬೇತಿಯು ಸಂಪೂರ್ಣ ಉಚಿತವಾಗಿರುತ್ತದೆ. ಎರಡು ಜೊತೆ ಸಮವಸ್ತ್ರ, ಒಂದು ಹೊತ್ತಿನ ಊಟದ ವ್ಯವಸ್ಥೆ ಈ ಸಂಸ್ಥೆಯಿಂದಲೇ ನೀಡಲಾಗುತ್ತಿದೆ. ಕೋರ್ಸ್ ಮುಕ್ತಾಯಗೊಳ್ಳುವ ವೇಳೆಗೆ ತರಬೇತಿ ಪಡೆದ ಅಭ್ಯರ್ಥಿಗಳ ಕಾರ್ಯ ಕ್ಷಮತೆ ಮೇರೆಗೆ ಉದ್ಯೋಗಾವಕಾಶವನ್ನು ಸಹ ಒದಗಿಸಲು ಅಗತ್ಯ ಕ್ರಮ ಈ ಸಂಸ್ಥೆಯು ವಹಿಸುತ್ತದೆ.
ಈ ಮೇಲೆ ತಿಳಿಸಿರುವ ಕೋರ್ಸ್‍ಗಳಲ್ಲಿ ಸ್ಪೋಕನ್ ಇಂಗ್ಲೀಷ್, ಕಂಪ್ಯೂಟರ್, ಬೇಸಿಕ್ ಜಿ.ಎಸ್.ಟಿ, ಟ್ಯಾಲಿ & ಅಕೌಂಟ್ಸ್, ಬ್ಯಾಂಕಿಂಗ್, ಕಮ್ಯೂನಿಕೇಶನ್ & ಪರ್ಸಾನಾಲಿಟಿ ಡೆವಲಪ್‍ಮೆಂಟ್ ಸ್ಕಿಲ್ಸ್, ಲೈಪ್ ಸ್ಕಿಲ್ಸ್, ಇಂಟರ್ ವ್ಯೂ ಸ್ಕಿಲ್ಸ್, ಕಸ್ಟಮರ್ ಸರ್ವಿಸ್, ರಿಟೇಲ್ಸ್, ಇಟಿಕ್ವಿಟೀ & ಗ್ರೂಮಿಂಗ್ ಸ್ಟಾಂಡರ್ಡ್ ಈ ವಿಷಯಗಳಡಿ ತರಬೇತಿ ನೀಡಲಾಗುತ್ತದೆ.
ಸದರಿ ಸಂಸ್ಥೆಯ ತರಬೇತಿ ಕೇಂದ್ರವು ಬೆಂಗಳೂರು ಮತ್ತು ಮೈಸೂರು ನಗರದಲ್ಲಿರುತ್ತವೆ. ಸದರಿ ತರಬೇತಿ ಅವಧಿಯಲ್ಲಿ ನಿಗಮದ ವತಿಯಿಂದ ಸ್ಥಳೀಯವಾಗಿ ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರತಿ ಮಾಹೆ ರೂ.1,200 ಗಳ ಪ್ರಯಾಣ ವೆಚ್ಚ ಹಾಗೂ ಬೇರೆ ಜಿಲ್ಲೆಗಳಿಂದ ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರತಿ ಮಾಹೆ ರೂ.5,000 ಗಳ ವಸತಿ ವೆಚ್ಚವಾಗಿ ಅಭ್ಯರ್ಥಿಗಳ ಖಾತೆಗೆ ನೇರವಾಗಿ ಪಾವತಿಸಲಾಗುತ್ತದೆ.
ಅಭ್ಯರ್ಥಿಗಳು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ್ ಕಾರ್ಡ್, ಪಡಿತರ ಚೀಟಿ, 02 ಭಾವಚಿತ್ರ ಹಾಗೂ ಬ್ಯಾಂಕ್ ಜೆರಾಕ್ಸ್‍ಗಳೊಂದಿಗೆ ಫೆಬ್ರವರಿ 20 ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಜಿ.ಎಚ್.ಎಸ್ ರಸ್ತೆ ಮಂಗಳೂರು ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2420114 ನ್ನು ಸಂಪರ್ಕಿಸಲು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.