ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಸಂದರ್ಶನ

July 24, 2020
10:54 AM

ಮಂಗಳೂರು : ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದಲ್ಲಿ ಬರುವ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಲು ಶುಶ್ರೂಷಕಿ, ಲ್ಯಾಬ್ ಟೆಕ್ನೀಷನ್, ಫಾರ್ಮಸಿಸ್ಟ್ ಹುದ್ದೆಗಳನ್ನು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ನೇಮಕಕ್ಕೆ ಜುಲೈ 25 ರಂದು 11 ಗಂಟೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣ ನೇರ ಸಂದರ್ಶನ ನಡೆಯಲಿದೆ.

ಹುದ್ದೆ ವಿವರ ಇಂತಿವೆ:

1. ಶುಶ್ರೂಷಕಿ – 3 ಹುದ್ದೆ, ವೇತನ – ರೂ. 25 ಸಾವಿರ, ವಿದ್ಯಾರ್ಹತೆ – ಡಿಪ್ಲೋಮ ಇನ್ ನರ್ಸಿಂಗ್ (ನರ್ಸಿಂಗ್ ಕೌನ್ಸಿಲ್‍ನಲ್ಲಿ ನೊಂದಣಿಯಾಗಬೇಕು)

2. ಪ್ರಯೋಗ ಶಾಲಾ ತಂತ್ರಜ್ಞರು – 21 ಹುದ್ದೆ, ವೇತನ – ರೂ. 20 ಸಾವಿರ, ವಿದ್ಯಾರ್ಹತೆ – ಡಿ.ಎಂ.ಎಲ್.ಟಿ ಕರ್ನಾಟಕ ಪ್ಯಾರ ಮೆಡಿಕಲ್ ಬೋರ್ಡ್ ಪ್ರಮಾಣ ಪತ್ರ

3.ಫಾರ್ಮಸಿಸ್ಟ್ – 34 ವೇತನ – ರೂ. 20 ಸಾವಿರ, ವಿದ್ಯಾರ್ಹತೆ – ಡಿ.ಫಾರ್ಮ್ (ಫಾರ್ಮಸಿ  ಕೌನ್ಸಿಲ್‍ಲ್ಲಿ  ನೊಂದಣಿಯಾಗಬೇಕು).

ಸಲ್ಲಿಸಬೇಕಾದ ದಾಖಲೆಗಳು: ವಿದ್ಯಾರ್ಹತೆಯ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿ ಹಾಗೂ ಅವುಗಳ ಸ್ವಯಂ ದೃಡೀಕೃತ ನಕಲು ಪ್ರತಿಗಳು, ಅನುಭವಕ್ಕೆ ಆದ್ಯತೆ ನೀಡಲಾಗುವುದು ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಹಾಜರಾಗುವುದು.

ಹೆಚ್ಚಿನ ಮಾಹಿತಿಗೆ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ  ಅಥವಾ ದೂರವಾಣಿ ಸಂಖ್ಯೆ: 0824-2423672 ಸಂಪರ್ಕಿಸಲು  ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror