ಆಲೆಟ್ಟಿ ಸಹಕಾರಿ ಸಂಘದ ಎದುರಿನಲ್ಲಿ ರೈತ ಸಂಘದ ವತಿಯಿಂದ ಪ್ರತಿಭಟನೆ

October 16, 2019
3:19 PM

ಸುಳ್ಯ:ಹಿಂದಿನ ಸಮ್ಮಿಶ್ರ ಸರಕಾರ ಮಾಡಿದ್ದ ಸಾಲ ಮನ್ನಾ ಮೊತ್ತವು  ರೈತರ ಖಾತೆಗೆ ಜಮೆ ಆಗದೇ ಇರುವುದನ್ನು ಪ್ರತಿಭಟಿಸಿ ರೈತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಆಲೆಟ್ಟಿ ಸಹಕಾರಿ ಸಂಘದ ಎದುರಿನಲ್ಲಿ ಅ.16 ರಂದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ , 15 ದಿನಗಳ ಒಳಗಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡದಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು‌. ಈಗಿನ ರಾಜ್ಯ ಸರಕಾರ ಸಾಲ ಮನ್ನಾ ಮಾಡುವುದು ಬಿಡಿ ಹಿಂದಿನ ಸರಕಾರಗಳು ನೀಡಿದ ಹಣವನ್ನು ತಲುಪಿಸುವ ಪ್ರಯತ್ನವನ್ನಾದರೂ ಮಾಡಲೀ. ಸರಕಾರಕ್ಕೆ, ಸಹಕಾರಿ ಸಂಘಗಳಿಗೆ ರೈತರ ಬಗ್ಗೆ ಕಾಳಜಿಯಿದ್ದರೆ ರೈತರ ಖಾತೆಗೆ ಹಣ ತುಂಬುವ ಪ್ರಯತ್ನವನ್ನು ಮಾಡುತ್ತೇವೆಂದು ರೈತರ ಮುಂದೆ ಪ್ರಮಾಣವನ್ನು ಮಾಡಲಿ ಎಂದು ಸವಾಲೆಸದರು. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಆಗಿರುವ ಪಾವತಿಯ ಮಾಹಿತಿಯನ್ನು ನೀಡತಕ್ಕದ್ದು, ಇಲ್ಲದಿದ್ದಲ್ಲಿ ಅಹೋರಾತ್ರಿ ಪ್ರತಿಭಟನೆಯನ್ನು ಮಾಡಲು ಹಿಂದೇಟು ಹಾಕುವುದಿಲ್ಲವೆಂದು ಎಚ್ಚರಿಸಿದರು.

ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror