ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದು(ಶುಕ್ರವಾರ) ಹಾಗೂ ನಾಳೆ(ಶನಿವಾರ) ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು) ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಗ್ರಾಹಕ ಸೇವೆಯಲ್ಲಿ ವ್ಯತ್ಯಯ ಕಾಣಲಿದೆ.
ವೇತನ ಹೆಚ್ಚಳ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರದಲ್ಲಿ ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನಭಾರತೀಯ ಬ್ಯಾಂಕ್ ಗಳ ಸಂಘ (ಐಬಿಎ) ಮತ್ತು ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)ದ ನಡುವೆ ನಡೆದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಬ್ಯಾಂಕ್ ಮುಷ್ಕರ ನಡೆಸಲು ಒಕ್ಕೂಟ ನಿರ್ಧರಿಸಿತು. ಒಟ್ಟು 9 ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel