ಉಚಿತ ಸಾಮೂಹಿಕ ವಿವಾಹ ನೋಂದಣಿ ಪ್ರಾರಂಭ

February 8, 2020
10:05 AM

ಮಂಗಳೂರು: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರುವ ಆಯ್ದ ಪ್ರಮುಖ ದೇವಸ್ಥಾನಗಳಲ್ಲಿ ಪ್ರಸಕ್ತ ಸಾಲಿನಿಂದ ಜನಸಾಮಾನ್ಯರ ಅನುಕೂಲಕ್ಕಾಗಿ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Advertisement
Advertisement
Advertisement

ಸರಕಾರದ ಈ ಸಾಮೂಹಿಕ ಉಚಿತ ವಿವಾಹ ಕಾರ್ಯಕ್ರಮದಲ್ಲಿ ಪ್ರತಿ ನವಜೋಡಿಗೆ ಅಗತ್ಯತೆಗನುಗುಣವಾಗಿ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್, ಶಲ್ಯಕ್ಕಾಗಿ 5 ಸಾವಿರ ರೂ ಗಳನ್ನು ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ ಮತ್ತು ರವಿಕೆ ಕಣಕ್ಕಾಗಿ 10 ಸಾವಿರ ರೂಪಾಯಿಗಳನ್ನು ಮತ್ತು ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು  (ಅಂದಾಜು 8 ಗ್ರಾಂ ತೂಕ) ಒದಗಿಸುತ್ತಿದ್ದು ಅಂದಾಜು ಒಟ್ಟು 55 ಸಾವಿರ ರೂ ಗಳನ್ನು ಸಂಬಂಧಿಸಿದ ಮುಜರಾಯಿ ದೇವಾಲಯದ ವತಿಯಿಂದ ಭರಿಸಲಾಗುವುದು.

Advertisement

ದ.ಕ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬಪ್ಪನಾಡು, ಕದ್ರಿ ಶ್ರೀ ಮಂಜುನಾಥ  ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಒಟ್ಟು 20 ದೇವಸ್ಥಾನಗಳಲ್ಲಿ ಆಸಕ್ತರು ವಧು ವರರ ಮಾಹಿತಿಗಳೊಂದಿಗೆ ಮಾರ್ಚ್ 27ರ ಒಳಗಾಗಿ ನೊಂದಾಯಿಸಿಕೊಳ್ಳಬಹುದು,  ಸಾಮೂಹಿಕ ವಿವಾಹವು ಎಪ್ರಿಲ್ 26 ರಂದು ಆದಿತ್ಯವಾರ ಅಕ್ಷಯತದಿಗೆಯಂದು ಸುಮೂಹೂರ್ತದಲ್ಲಿ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿಯ ಧಾರ್ಮಿಕ ದತ್ತಿ ಇಲಾಖೆಯಿಂದ ಪಡೆಯಬಹುದು ಹಾಗೂ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 25-11-2024 | ಒಣ ಹವೆ ಮುಂದುವರಿಕೆ | ನವೆಂಬರ್ ಕೊನೆಯ ತನಕವೂ ಮಳೆಯ ಸಾಧ್ಯತೆ ಇಲ್ಲ |
November 25, 2024
2:57 PM
by: ಸಾಯಿಶೇಖರ್ ಕರಿಕಳ
ಗದಗದ ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ
November 25, 2024
7:33 AM
by: The Rural Mirror ಸುದ್ದಿಜಾಲ
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ
November 25, 2024
7:26 AM
by: The Rural Mirror ಸುದ್ದಿಜಾಲ
ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ
November 25, 2024
7:15 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror