ಉಜಿರೆ: ರಾಜ್ಯ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇದರ ವತಿಯಿಂದ ಗ್ರಾಮ ಪಂಚಾಯಿತಿ ಮಟ್ಟಗಳಲ್ಲಿ ರಾಜ್ಯಾದ್ಯಂತ ನಡೆಯುವ ಸ್ವಚ್ಚತಾ ಅಭಿಯಾನಕ್ಕೆ ಮಂಗಳವಾರ ಧರ್ಮಸ್ಥಳದ ದೇವಳದ ವಠಾರದಲ್ಲಿ ಚಾಲನೆ ನೀಡಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ವಿ ಶೆಟ್ಟಿ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಪಾರುಪತ್ಯಗಾರ ಲಕ್ಷ್ಮೀನಾರಾಯಣ, ಧರ್ಮಸ್ಥಳ ಗ್ರಾ.ಪಂ ಶ್ರೀನಿವಾಸ, ಸಿಬ್ಬಂದಿ ದೇವಿಪ್ರಸಾದ್, ದಿನೇಶ್, ಅಭಿಯಾನ ತಂಡದ ಗಿರೀಶ್ ಸುರತ್ಕಲ್ ಉಪಸ್ಥಿತರಿದ್ದರು. ಬಳಿಕ ತಾಲ್ಲೂಕಿನ ವಿವಿಧ ಗ್ರಾ.ಪಂಗಳಿಗೆ ಅಭಿಯಾನ ಜಾಥ ತೆರಳಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel