ಬೆಂಗಳೂರು: ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಹಿರೇಕೂರಿನಲ್ಲಿ ಬಿಸಿ ಪಾಟೀಲ್ , ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ , ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ , ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು, ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು, ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ, ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ, ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ, ಅಥಣಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್’ಟಿ. ಸೋಮಶೇಖರ್ , ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್ ಅವರು ಗೆಲುವು ಸಾಧಿಸಿದ್ದಾರೆ. ಹೊಸಕೋಟೆಯಲ್ಲಿ ಬಿಜೆಪಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ್ದಾರೆ.