ಉರಿಯದ ದಾರಿ ದೀಪ – ನಗರ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ

July 31, 2019
1:07 PM

ಸುಳ್ಯ: ಸುಳ್ಯ ನಗರದ ನಾವೂರು ವಾರ್ಡ್ ನಲ್ಲಿ ದಾರಿ ದೀಪಗಳು ಉರಿಯುತ್ತಿಲ್ಲ, ಮೂಲಭೂತ ಅಭಿವೃದ್ಧಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ನಾವೂರು ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ನೇತೃತ್ವದಲ್ಲಿ ನಗರ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement
Advertisement

ಆಡಳಿತಾಧಿಕಾರಿ ತಹಶೀಲ್ದಾರ್ ಸ್ಥಳಕ್ಕೆ ಬಂದು ಭರವಸೆ ನೀಡಿ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ನಾವೂರು ವಾರ್ಡ್ ನಲ್ಲಿ 45 ದಾರಿದೀಪ ಇದ್ದು ಬಹಿತೇಕ ದೀಪಗಳು ಕಳೆದ 15 ದಿನಗಳಿಂದ ಉರಿಯುವುದಿಲ್ಲ, ಸುಳ್ಯ ಕತ್ತಲಲ್ಲಿ ಮುಳುಗಿದೆ. ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟ ಮುಂದುವರಿಸುವುದಾಗಿ ನ‌.ಪಂ‌.ಸದಸ್ಯ ಶರೀಫ್ ಕಂಠಿ ಹೇಳಿದರು.
ಎರಡು ದಿನದಲ್ಲಿ ಸಮಸ್ಯೆ ಪರಿಹರಿಸುವುದಾಗಿ ಅಧಿಕಾರಿಗಳು ನೀಡಿದ ಭರವಸೆಯ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೊ, ಅಬ್ದುಲ್ ಲತೀಪ್, ಹನೀಪ್ ಬೀಜಕೊಚ್ಚಿ, ಹುಕ್ರ, ಜಯ, ಭವಾನಿ, ಅಫ್ರಿದಿ ಮತ್ತಿತರರು ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ
July 24, 2025
11:13 PM
by: The Rural Mirror ಸುದ್ದಿಜಾಲ
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವ | ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು | ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸಂಸದ ಬ್ರಿಜೇಶ್‌ ಚೌಟ ಒತ್ತಾಯ |
July 24, 2025
10:40 PM
by: The Rural Mirror ಸುದ್ದಿಜಾಲ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group