ಮಂಗಳೂರು: ಮುಸಲ್ಮಾನರ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಮಂಗಳೂರಿನ ಉಳ್ಳಾಲ ಸಯ್ಯದ್ ಮದನಿ ದರ್ಗಾ ಹಾಗೂ ಅದರ ಅಧೀನದ ಸಂಸ್ಥೆಗಳಿಗೆ ಆಡಳಿತಾಧಿಕಾರಿಯಾಗಿ ನಿವೃತ್ತ ಸರ್ಕಾರಿ ಅಧಿಕಾರಿ ಹಾಜಿ ಇಬ್ರಾಹಿಂ ಗೂನಡ್ಕರವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿದೆ.
ಮಂಗಳೂರು, ಪುತ್ತೂರು ಸೇರಿದಂತೆ ವಿವಿಧ ತಾಲೂಕುಗಳ ಕ್ಷೇತ್ರಾಭಿವೃದ್ಧಿ ಅಧಿಕಾರಿಯಾಗಿ, ಸಾರಿಗೆ ಸಚಿವಾಲಯದ ವಿಶೇಷಾಧಿಕಾರಿಯಾಗಿ, ಕಾರ್ಮಿಕ ಇಲಾಖೆಯ ಉಪಕಾರ್ಯದರ್ಶಿಯಾಗಿ, ರಾಜ್ಯ ಅಂಗವಿಕಲರ ಅಧಿನಿಯಮದ ಸಹಾಯಕ ಆಯುಕ್ತರಾಗಿ, ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾಗಿ ಇಬ್ರಾಹಿಂ ಗೂನಡ್ಕರವರು ಸೇವೆಯನ್ನು ಸಲ್ಲಿಸಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel