ನವದೆಹಲಿ: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಗ್ರಾಮಮಟ್ಟದಿಂದ ಅಭಿಪ್ರಾಯ ಪಡೆಯಲು ಹಾಗೂ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಎ. 24ರಂದು ದೇಶದ ವಿವಿಧ ಗ್ರಾಮ ಪಂಚಾಯತ್ ಗಳನ್ನು ಉದ್ದೇಶಿಸಿ ಭಾಷಣ ಹಾಗೂ ವಿವಿಧ ಗ್ರಾಮ ಪಂಚಾಯತ್ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ. ಎ.27 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾಗಿರುವ ಎ. 24ರಂದು ವಿವಿಧ ಗ್ರಾಮ ಪಂಚಾಯತ್ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ ಎಂದು ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಏಕೀಕೃತ ಇ-ಗ್ರಾಮ್ ಸ್ವರಾಜ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್‌ಗೆ ಚಾಲನೆ ನೀಡಲಿದ್ದಾರೆ. ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಯೋಜನೆಗಳನ್ನು ತಯಾರಿಸಲು ಮತ್ತು ಕಾರ್ಯಗತಗೊಳಿಸಲು ಈ ಪೋರ್ಟಲ್ ಸಹಕಾರಿಯಾಗಲಿದೆ.
ಎ.27 ರಂದು ಇನ್ನೊಂದು ವಿಡಿಯೋ ಕಾನ್ಫರೆನ್ಸ್ : ಮೇ.3 ರಂದು ಎರಡನೇ ಹಂತದ ಲಾಕ್ಡೌನ್ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಲಾಕ್ಡೌನ್ ಕೊನೆಯ ವಾರ ನಿರ್ಣಾಯಕವಾಗಿರುವುದರಿಂದ ಎ.27 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.ಆಯಾ ಸರ್ಕಾರಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿರುವ ಪ್ರಧಾನಿ ಮೋದಿಯವರು ರಾಜ್ಯಗಳ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಿದ್ದಾರೆ.