ಕಾಣಿಯೂರು: ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಕಾಣಿಯೂರು ಇದರ ವತಿಯಿಂದ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ದಿನಾಂಕ ಎ.29 ರಂದು ಸೋಮವಾರ ಸಂಜೆ ಗಂಟೆ 4.30 ರಿಂದ ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಮಠದ ಸ್ವಾಮೀಜಿಗಳಾದ ಶ್ರೀ ವಿದ್ಯಾಪ್ರಸನ್ನ ತೀರ್ಥರು ಆಶೀರ್ವಚನ ನೀಡಲಿದ್ದಾರೆ. ಸಂಜೆ ಗಂಟೆ 4.30ರಿಂದ ಪೂಜೆ ಪ್ರಾರಂಭ 6.30ಕ್ಕೆ ಮಹಾಪೂಜೆ ನಂತರ 7.30ರಿಂದ ಶ್ರೀ ಸ್ವಾಮೀಜಿಯವರಿಂದ ಆಶೀರ್ವಚನ ನಡೆಯಲಿದೆ ಎಂದು ಭಜನಾ ಮಂಡಳಿ ಪ್ರಕಟಣೆ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel