ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಜ.27, 29 ಹಾಗೂ 30 ರಂದು ಜಿಲ್ಲೆಯ ವಿವಿದೆಡೆ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಜ.27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿ ಹಾಲ್‍ನಲ್ಲಿ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ.
ಜ.29 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ಪ್ರವಾಸಿ ಮಂದಿರ.
ಜ.30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಆರಕ್ಷಕ ಉಪಾಧೀಕ್ಷಕರು ಭರತ್ ಎಸ್ ರೆಡ್ಡಿ ಭ್ರಷ್ಟಾಚಾರ ನಿಗ್ರಹ ದಳ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ