ಎಣ್ಮೂರು ಗ್ರಾಮ ಪಂಚಾಯತ್ ನೌಕರ ಆತ್ಮಹತ್ಯೆ

September 4, 2019
7:16 PM

ನಿಂತಿಕಲ್ಲು: ಎಣ್ಮೂರು ಗ್ರಾಮ ಪಂಚಾಯತ್ ನೌಕರ ಮೋಹನ (35) ಎಂಬವರು ಮಂಗಳವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಕೊಂಡ ಘಟನೆ ನಡೆದಿದೆ.

ಎಣ್ಮೂರು ಗ್ರಾಮ ಪಂಚಾಯತ್ ಲ್ಲಿ ನಡೆದಿದೆ ಎನ್ನಲಾದ  ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿ ಪಂಚಾಯತ್ ಆಡಳಿತ ಮಂಡಳಿ ಇಬ್ಬರು ನೌಕರರನ್ನು ಅಮಾನತುಗೊಳಿಸಿತ್ತು. ಅವರಲ್ಲಿ ಮೋಹನ್ ಕೂಡಾ  ಒಬ್ಬರಾಗಿದ್ದರು. ಕೆಲಸದಿಂದ ಅಮಾನತುಗೊಂಡಿದ್ದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷ ಸೇವಿಸಿದ  ವಿಚಾರ ತಿಳಿದ ಮನೆಯವರು ಮತ್ತು ಸ್ಥಳೀಯರು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇಂದು ಬೆಳಗ್ಗೆ ಮೃತದೇಹವನ್ನು ಅವರ ಮನೆಗೆ ತರಲಾಗಿದೆ.

ಈ ಪ್ರಕರಣದ ಕುರಿತು ಸೂಕ್ತವಾಗಿ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ತನಿಖೆಗೆ ದಲಿತ ಸಂಘಟನೆಗಳು  ಆಗ್ರಹಿಸಿದ್ದು, ತಪ್ಪಿದಲ್ಲಿ ಮೃತದೇಹವನ್ನು ಪಂಚಾಯತ್ ಮುಂಭಾಗದಲ್ಲಿ ಇಟ್ಟು ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆ ಹೇಳಿದೆ. ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಈರಯ್ಯ ಡಿ.ಎನ್ ಮಾಹಿತಿ ಪಡೆದುಕೊಂಡಿದ್ದು, ಮೃತ ಮೋಹನರ ಪತ್ನಿಗೆ ಉದ್ಯೋಗ ದೊರಕಿಸಿ ಕೊಡಲು ಸಂಬಂಧಿಸಿದವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಿಚಾರ ಹಿಂದೆ ತೆಗೆದುಕೊಳ್ಳಲಾಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror