ಎಸ್.ಎಸ್.ಎಲ್.ಸಿ : ತುಳು ಭಾಷೆಯಲ್ಲಿ ಉತ್ತಮ ಸಾಧನೆ ದಾಖಲಿಸಿದ ವಿದ್ಯಾರ್ಥಿಗಳು

August 13, 2020
6:36 PM

ಮಂಗಳೂರು : 2019-20ರ ಶೈಕ್ಷಣಿಕ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 42 ಶಾಲೆಗಳಲ್ಲಿ 6,7, 8, 9 ಮತ್ತು 10ನೇ ತರಗತಿಗಳಲ್ಲಿ ಒಟ್ಟು 2568 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿರುತ್ತಾರೆ. ಈ ಪೈಕಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ 39 ಶಾಲೆಗಳ ಒಟ್ಟು 924 ವಿದ್ಯಾರ್ಥಿಗಳಲ್ಲಿ 917 ವಿದ್ಯಾರ್ಥಿಗಳು ಪಾಸಾಗಿದ್ದು ಶೇಕಡಾ 99% ಫಲಿತಾಂಶ ದಾಖಲಿಸಿದ್ದಾರೆ. 234 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿರುತ್ತಾರೆ.

ತುಳುವಿನಲ್ಲಿ ಉತ್ತಮ ಸಾಧನೆ ದಾಖಲಿಸುವ ಮೂಲಕ ಶಾಲೆಗಳ ಫಲಿತಾಂಶ ಹಾಗೂ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಏರಿಕೆಯಾಗಿರುವುದು ಕಂಡು ಬರುತ್ತದೆ. ಇದಕ್ಕೆ ಕಾರಣರಾದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಗಳ ಮುಖ್ಯ ಶಿಕ್ಷಕರು, ತುಳು ಭಾಷಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್ ತಿಳಿಸಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ತುಳು ಪಠ್ಯ ಭೋದನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ತೃತೀಯ ಐಚ್ಛಿಕ ಭಾಷೆಯಾಗಿ ತುಳುವನ್ನು ಆಯ್ಕೆ ಮಾಡುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತಿದ್ದು ಈ ಮೂಲಕ ಶಾಲೆಗಳು ಕೂಡಾ ಫಲಿತಾಂಶದಲ್ಲಿ ದಾಖಲೆ ನಿರ್ಮಿಸುತ್ತಿದೆ. ಹಾಗೂ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳ ಶಿಕ್ಷಕ ವರ್ಗ ಹಾಗೂ ಆಡಳಿತ ಮಂಡಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ
July 19, 2026
8:11 AM
by: ದ ರೂರಲ್ ಮಿರರ್.ಕಾಂ
ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?
July 19, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror