ಮಂಗಳೂರು: ದೇಶಾದ್ಯಂತ ಕೊರೋನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಲಾಕ್ ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಾಹನ ಸಂಚಾರ ನಿರ್ಬಂಧವಿದ್ದರೂ ಸಾರ್ವಜನಿಕರು ಅನಗತ್ಯವಾಗಿ ಸಂಚರಿಸುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ ದ್ವಿಚಕ್ರ ವಾಹನಗಳು, ಕಾರುಗಳು, ಖಾಸಗಿ ವಾಹನಗಳ ಸಂಚಾರವನ್ನು ಏ. 2 ರ ಮದ್ಯಾಹ್ನ 12.30ರ ನಂತರ ಸಂಪೂರ್ಣ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಪಿ. ಎಸ್ ಹರ್ಷಾ ತಿಳಿಸಿದ್ದಾರೆ.
ತುರ್ತು ವೈದ್ಯಕೀಯ ಅಗತ್ಯಗಳಿಗಾಗಿ ಸಾರ್ವಜನಿಕರು ಆಂಬುಲೆನ್ಸ್ ಸೇವೆಗಳನ್ನು ಬಳಸಬಹುದು. ವಿವರವಾದ ಸಲಹೆಯನ್ನು ಶೀಘ್ರದಲ್ಲೇ ಜಿಲ್ಲಾಡಳಿತ ಹೊರಡಿಸಲಿದೆ ಎಂದು ತಿಳಿಸಿದ ಅವರು ಎಲ್ಲರೂ ಸಹಕರಿಸಲು ಮನವಿ ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel