ಐವರ್ನಾಡಿನಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವ

October 6, 2019
7:32 PM

ಸುಳ್ಯ:ಐವರ್ನಾಡು  ಯುವಶಕ್ತಿ ಸಂಘದ ವತಿಯಿಂದ  ಐವರ್ನಾಡು ಸ.ಹಿ.ಪ್ರಾ.ಶಾಲೆಯ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ  ಶ್ರೀ ಶಾರದಾ ಪೂಜಾ ಮಹೋತ್ಸವ ನಡೆಯಿತು.

ಶನಿವಾರ ಬೆಳಗ್ಗೆ ಪುತ್ತಿಲ ಗಿರೀಶ್ ಅಸ್ರಣ್ಣ ಅವರ ನೇತೃತ್ವದಲ್ಲಿ ಗಣಪತಿ ಹೋಮ ಮತ್ತು ಶ್ರೀ ಶಾರದಾ ದೇವಿಯ ಪ್ರತಿಷ್ಟಾಪನೆ ನಡೆಯಿತು. ನಂತರ ನಂತರ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾಕಾರ್ಯಕ್ರಮ ನಡೆಯಿತು.

ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ  ವಹಿಸಿದ್ದರು. ಅತಿಥಿಗಳಾಗಿ ಸುಳ್ಯ ವರ್ತಕ ಸಂಘದ ಅಧ್ಯಕ್ಷ ಪಿ,ಬಿ.ಸುಧಾಕರ ರೈ ಭಾಗವಹಿಸಿದ್ದರು. ಚಿದಾನಂದ ಯು.ಎಸ್.ಗೂನಡ್ಕ ಧಾರ್ಮಿಕ ಉಪನ್ಯಾಸ ನೀಡಿದರು.ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ  ಗಿರಿಜಮ್ಮ, ಎಸ್.ಡಿ.ಎಂ.ಸಿ.ಅಧ್ಯಕ್ಷ ನಾಗಪ್ಪ ಗೌಡ ಪಾಲೆಪ್ಪಾಡಿ,ಯುವಶಕ್ತಿ ಸಂಘದ ಅಧ್ಯಕ್ಷ ಜಗದೀಶ ಉದ್ದಂಪಾಡಿ,ಪ್ರಧಾನ ಕಾರ್ಯದರ್ಶಿ ಲೋಕೇಶ್ ಪರ್ಲಿಕಜೆ ಉಪಸ್ಥಿತರಿದ್ದರು. ಇದೇ ವೇಳೆ ನಿವೃತ್ತ ಮುಖ್ಯೋಪಾಧ್ಯಾಯ ಶಾಂತರಾಮ ಕೆ.ಎಸ್. ಅವರನ್ನು ಶಾಲು ಹೊದಿಸಿ,ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಯುವಶಕ್ತಿ ಸಂಘದ ಗೌರವಾಧ್ಯಕ್ಷ ದಿನೇಶ್ ಮಡ್ತಿಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂಚಲಾಕ್ಷಿ ಕತ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಜಗದೀಶ ಉದ್ದಂಪಾಡಿ ವಂದಿಸಿದರು.ಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ವಿಜೇತರ ಪಟ್ಟಿಯನ್ನು ವಿನಯ ಕೋಂದ್ರಮಜಲು ವಾಚಿಸಿದರು.

ಭಾನುವಾರ ಬೆಳಗ್ಗೆ ಯುವಶಕ್ತಿ ಸಂಘದ ಸದಸ್ಯರಿಂದ ಮತ್ತು ಶಾಲಾ ಮಕ್ಕಳಿಂದ ಭಜನಾ ಕಾರ್ಯಕ್ರಮ , ಅಕ್ಷರಾಭ್ಯಾಸ ನಡೆದು ಸಂಜೆ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ಐವರ್ನಾಡಿನ ಮುಖ್ಯ ರಸ್ತೆಯಲ್ಲಿ ನಡೆದು  ಜಲಸ್ತಂಭನ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror