ಐಸಿಡಿಎಸ್ ದಿನಾಚರಣೆ- ಅಪೌಷ್ಟಿಕತೆಯ ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ

October 3, 2019
6:36 PM

ಸುಳ್ಯ:ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆಯ ಬೆಳ್ಳಾರೆ ವಲಯದ ವತಿಯಿಂದ ಐಸಿಡಿಎಸ್ ದಿನಾಚರಣೆಯನ್ನು ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಐವರ್ನಾಡು ಗ್ರಾಮ ಪಂಚಾಯತ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಮಂಜುಶ್ರೀ ಗೆಳೆಯರ ಬಳಗದ ಸಹಯೋಗದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಧಾರಣ ಅಪೌಷ್ಟಿಕತೆಯನ್ನು ಹೊಂದಿರುವ 4 ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನ ಉಚಿತವಾಗಿ ಮೊಟ್ಟೆಯನ್ನು ವಿತರಿಸುವ ಯೋಜನೆಗೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಅಂಗನವಾಡಿ ಕೇಂದ್ರಗಳಲ್ಲಿ 3-6 ವರ್ಷದ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆಯನ್ನು ಈಗಾಗಲೇ ಇಲಾಖೆಯಿಂದ ನೀಡಲಾಗುತ್ತಿದೆ. ಸಾಧಾರಣ ಅಪೌಷ್ಟಿಕತೆ ಹೊಂದಿರುವ ಮಕ್ಕಳಿಗೆ ನಾಲ್ಕು ದಿನ ಮೊಟ್ಟೆ ನೀಡುವ ಯೋಜನೆಯಿಂದ ಆ ಮಗು ವಾರದ 6 ದಿನವೂ ಮೊಟ್ಟೆಯನ್ನು ಸೇವಿಸಿ ಮಗುವಿನ ಪೌಷ್ಟಿಕ ತೆಯ ಮಟ್ಟವನ್ನು ಉತ್ತಮಪಡಿಸಲು ಸಹಕಾರಿಯಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಯು.ಡಿ‌.ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶೈಲಜಾ.ಬಿ., ಮಂಜುಶ್ರೀ ಗೆಳೆಯರ ಬಳಗದ ಅಧ್ಯಕ್ಷ ಧರ್ಮಪಾಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror