ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಮಧ್ಯರಾತ್ರಿಯಿಂದ ಲಾಕ್ಡೌನ್ ಕೊಂಚ ಸಡಿಲಿಕೆ | ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ |

April 22, 2020
7:40 PM

ಬೆಂಗಳೂರು:  ರಾಜ್ಯದಲ್ಲಿ ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ  ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್‌ಡೌನ್‌ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.

ರಾಜ್ಯದಲ್ಲಿ ಹೆಚ್ಚು ಕೊರೊನಾ  ಪಾಸಿಟಿವ್​​ ಕಾಣಸಿಕೊಂಡಿರುವ ಕಂಟೈನ್ಮೆಂಟ್‌ ಝೋನ್‌, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ‌ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್‌, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್‌ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.

ಯಾವುದರಲ್ಲಿ ಸಡಿಲಿಕೆ :

  •  ರಸಗೊಬ್ಬರ, ಎಪಿಎಂಸಿ ಮಾರ್ಕೆಟ್ ಸಂಪೂರ್ಣ ತೆರವು
  • ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ
  • ಕೃಷಿ ನೀರಾವರಿಗೆ ಯಾವುದೇ ನಿರ್ಬಂಧ ಇಲ್ಲ
  • ಅಂತರ​ರಾಜ್ಯ ವಾಹನ ಓಡಾಡಕ್ಕೆ ಅವಕಾಶ
  • ಕಟ್ಟಡ ನಿರ್ಮಾಣಕ್ಕೆ ಅನುಮತಿ
  • ಕಟ್ಟಡ ಕಾಮಾಗರಿಗಳಿಗೆ ಅನುಮತಿ
  • ಟೀ ಕಾಫಿ ಪ್ಲಾಂಟೇಷನ್​​ಗೆ ಅನುಮತಿ
  • ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ
  • ಪಶುಸಂಗೋಪನೆಗೆ ಅವಕಾಶ
  • ಬ್ಯಾಂಕುಗಳ ನಿರ್ವಹಣೆಗೆ ಮುಂದುವರಿಕೆ
  • ಹೋಟೆಲ್​ಗಳಲ್ಲಿ ಪಾರ್ಸೆಲ್ ಸೇವೆಗಳಿಗೆ ಅವಕಾಶ
  • ಕೋರಿಯಾರ್ ಸೇವೆಗೆ ಅನುಮತಿ
  • ಪಾಸ್ ಇದ್ದವರಿಗೆ ಸಂಚಾರಕ್ಕೆ ಅವಕಾಶ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror