ಬೆಂಗಳೂರು: ಕನಕಪುರ ಬಂಡೆ ಎಂದು ನನ್ನನ್ನು ಹೇಳುತ್ತಾರೆ, ಆದರೆ ನಾನು ಬಂಡೆಯಾಗಲು ಬಯಸುವುದಿಲ್ಲ, ವಿಧಾನಸೌಧದ ಮುಂದಿನ ಚಪ್ಪಡಿಯಾಗುತ್ತೇನೆ. ಕಾರ್ಯಕರ್ತರೆಲ್ಲರೂ ಅದನ್ನು ತುಳಿದುಕೊಂಡು ವಿಧಾನಸೌಧ ಏರಬೇಕು ಎಂದು ಬಯಸುತ್ತೇನೆ. ಬಿಜೆಪಿಯವರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜೈಲಿಗೆ ಕಳುಹಿಸಿದ್ದರು, ಯಾವುದೇ ಕೇಸುಗಳಿಗೆ ಬಗ್ಗೋ ಜನ ನಾನಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
Advertisement
ಕೆಪಿಸಿಸಿ ಅಧ್ಯಕ್ಷರಾಗಿ 4 ತಿಂಗಳ ಹಿಂದೆ ನೇಮಕಗೊಂಡಿದ್ದ ಡಿ.ಕೆ. ಶಿವಕುಮಾರ್ ಇಂದು ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷನಾಗಿರಬಹುದು.ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತನೇ. ಎಲ್ಲಾ ಸಮಸ್ಯೆಗಳನ್ನೂ ಎದುರಿಸಿದ್ದೇನೆ, ಅದು ಸ್ವಂತಕ್ಕಾಗಿ ಅಲ್ಲ ಎಂದರು. ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಗುಂಪುಗಾರಿಕೆಯಲ್ಲಿ ನನಗೆ ನಂಬಿಕೆಯಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement