ಮಂಗಳೂರು/ಸುಳ್ಯ: ಅರಬಿಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದರ ಪರಿಣಾಮವಾಗಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರವು ಹೆಚ್ಚಿನ ಮಳೆ ಬೀಳುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಸೂಚನೆ ನೀಡಿದೆ. ಸಾರ್ವಜನಿಕರು ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
Advertisement
ಗುರುವಾರ ಮಧ್ಯಾಹ್ನದ ವೇಳೆಗೆ ಜಿಲ್ಲೆಯ ವಿವಿದೆಡೆ ಭಾರೀ ಗಾಳಿ ಸಹಿತ ಮಳೆಯಾಗಿದೆ. ಗಾಳಿಯ ಕಾರಣದಿಂದ ವಿವಿದೆಡೆ ಮರ ಉರುಳಿ ರಸ್ತೆಗೆ ಬಿದ್ದಿದೆ. ಸುಳ್ಯ ತಾಲೂಕಿನ ಗುತ್ತಿಗಾರು – ಬಳ್ಪ ರಸ್ತೆಯಲ್ಲಿ ಮರವೊಂದು ಬಿದ್ದು ಕೆಲಕಾಲ ಸಂಚಾರಕ್ಕೆ ಅಡ್ಡಿಯಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement