ಕಸಾಪ ಸಾಹಿತ್ಯ ಸಂಭ್ರಮ ಸಮಾರೋಪ

November 8, 2019
9:58 AM

ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ 5 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸಾಹಿತ್ಯ ಸಂಭ್ರಮ – 2019 ಇದರ ಸಮಾರೋಪ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಖ್ಯಾತ ಗಾಯಕ ಶಶಿಧರ್ ಕೋಟೆ ಮಾತನಾಡಿ, ವಿದ್ಯಾರ್ಥಿಗಳು ಮೂಲಸಂಸ್ಕೃತಿಯನ್ನು ಮತ್ತು ಹೃದಯದ ಭಾಷೆಯನ್ನು ಎಂದಿಗೂ ಮರೆಯಬಾರದು. ಹಿರಿಯರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು.ಎಲ್ಲಾ ಭಾಷೆಗಳನ್ನು ಪ್ರೀತಿಸಿಕೊಂಡು ನಮ್ಮ ಸಂಸ್ಕೃತಿಯ ಪರಿಧಿಯಲ್ಲಿಯೇ ಒಳ್ಳೆಯದಕ್ಕೆ ಬದಲಾವಣೆಗಳನ್ನು ಮಾಡಿಕೊಂಡು ಚಲಿಸುವ ನೀರಿನಂತೆ ಮುಂದುವರಿಯಬೇಕು ಎಂದು ಹೇಳಿದರು.

Advertisement
Advertisement
Advertisement
Advertisement
Advertisement

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸೇವೆಗೆ ಮಣಿಕ್ಕರ ಗೋಪಾಲಕೃಷ್ಣ ಶ್ಯಾನುಭೋಗ್, ಕಲೆಗೆ ಕೊಡುಗೆ ನೀಡಿದ ವಾರಿಜ ಬಾಳಿಲ, ಯಕ್ಷಗಾನ ಕಲಾವಿದ ರಾಮಚಂದ್ರ ಅರ್ಬಿತ್ತಾಯರವರನ್ನು ಕನ್ನಡ ಸಾಹಿತ್ಯ ಪರಿಷತ್ ನ ಪೂರ್ವಾಧ್ಯಕ್ಷ ಜಾಕೆ ಮಾಧವ ಗೌಡರ ಶಾಲು ಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ನ್ಮಾನಿಸಿದರು. ಖ್ಯಾತ ಗಾಯಕ ಶಶಿಧರ್ ಕೋಟೆಯರನ್ನು ಮತ್ತು ಮಾಧವ ಗೌಡ ಜಾಕೆಯವರನ್ನು ಡಾ.ಹರಪ್ರಸಾದ್ ತುದಿಯಡ್ಕರವರು ಸನ್ಮಾನಿಸಿದರು.

Advertisement

ವೇದಿಕೆಯಲ್ಲಿ ಸುವಿಚಾರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕಾರ್ಯದರ್ಶಿ ಗಿರಿಜಾ, ಕನ್ನಡ ಸಾಹಿತ್ಯ ಪರಿಷತ್ ನ ಕೋಶಾಧಿಕಾರಿ ದಯಾನಂದ ಆಳ್ವ, ಕಾಲೇಜಿನ ಪ್ರಾಂಶುಪಾಲೆ ಹಸಿನಾ ಭಾನು, ಹಿರಿಯ ಶಿಕ್ಷಕಿ ನಾಗರತ್ನ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ ಉಪಸ್ಥಿತರಿದ್ದರು.
ಚಂದ್ರಶೇಖರ್ ಪೇರಾಲು ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯದರ್ಶಿ ತೇಜಸ್ವಿ ಕಡಪಾಳ ವಂದಿಸಿದರು. ಶಿಕ್ಷಕಿ ಮಮತ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror