ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಿಸಲು ಎಲ್ಲಾ ಪ್ರಯತ್ನ- ರಾಜ್‍ಮೋಹನ್ ಉಣ್ಣಿತ್ತಾನ್

June 9, 2019
9:55 PM

ಸುಳ್ಯ: ಕೇರಳ ಮತ್ತು ಕರ್ನಾಟಕದ ಗಡಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪೂರಕಾಗಬಲ್ಲ ಮತ್ತು ಎರಡೂ ರಾಜ್ಯಗಳ ಮಧ್ಯೆ ಕ್ರಾಂತಿಕಾರಿ ಸಂಪರ್ಕ ಕಲ್ಪಿಸುವ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಾಣಕ್ಕೆ ಎಲ್ಲಾ ಪ್ರಯತ್ನಗಳನ್ನೂ ಮಾಡಲು ಸಿದ್ಧ ಎಂದು ಕಾಸರಗೋಡಿನ ನೂತನ ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಹೇಳಿದ್ದಾರೆ.

Advertisement
Advertisement

ಕಾಞಂಗಾಡ್ ನಗರ ಅಭಿವೃದ್ಧಿ  ಕ್ರಿಯಾ ಸಮಿತಿಯು ಸಂಸದರ ಜೊತೆ ನಡೆಸಿದ ಮಾತುಕತೆಯ ವೇಳೆ ಈ ಭರವಸೆ ನೀಡಿದ್ದಾರೆ. ಕೇರಳ ರಾಜ್ಯ ಸರಕಾರ ಹಳಿ ನಿರ್ಮಾಣಕ್ಕೆ ಕೈಜೋಡಿಸುವುದಾಗಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಈಗಾಗಲೇ ಪತ್ರ ನೀಡಿದ್ದಾರೆ. ಹಳಿ ನಿರ್ಮಾಣಕ್ಕೆ ಭೂ ಸ್ವಾಧೀನಕ್ಕೆ ಬೇಕಾದ ಖರ್ಚಿನ ಅರ್ಧಾಂಶವನ್ನು ನೀಡುವುದಾಗಿ ಪತ್ರದಲ್ಲಿ ತಿಳಿಸಿದೆ. ಕೇರಳ ಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಈ ವಿಚಾರದ ಕುರಿತು ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಸ್ಪಷ್ಟತೆಯನ್ನು ಪಡೆಯಲಾಗುವುದು. ಕರ್ನಾಟಕ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹಳಿ ನಿರ್ಮಾಣ ವೆಚ್ಚದ ಅರ್ಧ ಖರ್ಚನ್ನು ಭರಿಸಲು ಕರ್ನಾಟಕ ರಾಜ್ಯ ಒಪ್ಪುವಂತೆ ವಿನಂತಿಸಲಾಗುವುದು. ಕೇಂದ್ರ ರೈಲ್ವೇ ಖಾತೆ ಸಚಿವರನ್ನು ಮತ್ತು ರೈಲ್ವೇ ಬೋರ್ಡ್ ಅಧ್ಯಕ್ಷರನ್ನು ಭೇಟಿ ಮಾಡಿ ಕಾಞಂಗಾಡ್-ಕಾಣಿಯೂರು ಹಳಿ ಎಂಬ ಕನಸನ್ನು ನನಸು ಮಾಡಲು ಎಲ್ಲಾ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ರಾಜ್‍ಮೋಹನ್ ಉಣ್ಣಿತ್ತಾನ್ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
ಅಡಿಕೆ ಬೆಳೆಗೆ ಕೊಳೆರೋಗ | ಎಲೆಚುಕ್ಕಿ ರೋಗ ಸಾಧ್ಯತೆ | ಮುನ್ನೆಚ್ಚರಿಕಾ ಕ್ರಮಗಳಿಗೆ ಇಲಾಖೆ ಸೂಚನೆ |
July 21, 2025
9:37 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group