“ಕಾಟಿಬೆಟ್ಟದ ಕತೆಗಳು” ಪುಸ್ತಕ ಅನಾವರಣ : ಪ್ರಕೃತಿಯನ್ನು ಉಳಿಸಲು ಖ್ಯಾತ ರಂಗಕರ್ಮಿ ಪ್ರಸನ್ನ ಕರೆ

June 16, 2019
10:30 AM

ಮಡಿಕೇರಿ  : ಕಳೆದು ಹೋದ ಪ್ರಕೃತಿಯನ್ನು ಉಳಿಸಿಕೊಳ್ಳಲಾಗದೆ ಮತ್ತೊಬ್ಬರ ನಂಬಿಕೆಯನ್ನು ಪ್ರಶ್ನಿಸಿ ಮಾನಸಿಕ ಹಿಂಸೆ ನೀಡುವ ಪ್ರಯತ್ನಗಳು ಹೆಚ್ಚಾಗುತ್ತಿದೆ ಎಂದು ಶಿವಮೊಗ್ಗ ಕವಿಕಾವ್ಯ ಟ್ರಸ್ಟ್ ನ   ರಂಗಕರ್ಮಿ ಪ್ರಸನ್ನ ವಿಷಾದ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement

ಕೊಡಗು ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜ್‍ನ ಸಂಯುಕ್ತಾಶ್ರಯದಲ್ಲಿ ಕಾಲೇಜು ಆವರಣದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಬಿ.ಆರ್.ಜೋಯಪ್ಪ ಅವರು ಬರೆದ “ಕಾಟಿಬೆಟ್ಟದ ಕತೆಗಳು” ಪುಸ್ತಕ ಅನಾವರಣ ಕಾರ್ಯಕ್ರಮ ನಡೆಯಿತು.
ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದ ಪ್ರಸನ್ನ ಅವರು, ಹಿಂದೆ ಪರಿಸರವನ್ನು ಉಳಿಸಿ ಬೆಳೆಸುವ ಸಂಸ್ಕೃತಿಯನ್ನು ಅನುಸರಿಸಲಾಗುತ್ತಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ಬೆಟ್ಟ, ಗುಡ್ಡಗಳನ್ನು ನಾಶ ಮಾಡಿ, ಕಟ್ಟಡ ಕಾಮಗಾರಿಗಳಿಂದ ಪ್ರಕೃತಿಯ ಸೊಬಗನ್ನು ನಿರಂತರವಾಗಿ ನಾಶ ಮಾಡಲಾಗುತ್ತಿದೆ. ಬಾಲ್ಯವೆಂಬುದು ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಮಹತ್ತರ ಘಟ್ಟವಾಗಿದೆ. ಆದರೆ ಆಧುನಿಕತೆಯ ಆಡಂಬರದಿಂದಾಗಿ ಮಕ್ಕಳ ಬದುಕು ಸಂಕುಚಿತಗೊಳ್ಳುತ್ತಿದೆ. ಹೆಣ್ಣು ಮಕ್ಕಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆಚಾರ ವಿಚಾರವನ್ನು ಗೌರವಿಸುತ್ತಿದ್ದರು. ಆದರೆ ಇಂದು ಪದ್ದತಿ, ಪರಂಪರೆಗಳು ನಾಶವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಪರಿಸರದ ಅಳಿವು-ಉಳಿವು ಸ್ತ್ರೀಶಕ್ತಿ ಕೈಯಲಿದೆ ಎಂದರು. ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾತ್ತಿದ್ದು, ತಾಂತ್ರಿಕತೆಯೊಂದಿಗೆ ಓದಿನ ಮೇಲೆ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಪ್ರಸನ್ನ ಕಿವಿಮಾತು ಹೇಳಿದರು.

Advertisement

ಹೆಸರಾಂತ ಕತೆಗಾರ ಹಾಗೂ ಮೈಸೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಅಬ್ದುಲ್ ರಶೀದ್ ಮಾತನಾಡಿ, ಹಿಂದಿನ ಕಾಲದಲ್ಲಿ ಒಂದು ಪುಸ್ತಕವನ್ನು ಪ್ರಕಟ ಮಾಡಬೇಕಾದರೆ ಅದರಲ್ಲಿ ಅನೇಕರ ಪರಿಶ್ರಮ ಅಡಕವಾಗಿರುತ್ತಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ನೂತನ ತಂತ್ರಜ್ಞಾನದಿಂದಾಗಿ ಲೇಖನ ಪ್ರಕಟ, ಪುಸ್ತಕ ಮುದ್ರಣ ಮತ್ತು ಓದುವುದು ಸುಲಭವಾಗಿದೆ ಎಂದರು.

“ಬೆಟ್ಟದ ಕತೆಗಳು” ಕೃತಿಕಾರ ಬಿ.ಆರ್.ಜೋಯಪ್ಪ ಮಾತನಾಡಿ ಕೃತಿ ರಚನೆಯ ಅನುಭವಗಳನ್ನು ಹಂಚಿಕೊಂಡರು. ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಯಂ.ಪಿ.ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜ್‍ನ ಪ್ರಾಂಶುಪಾಲ ಪಿ.ಆರ್.ವಿಜಯ, ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಫರ್ಡ್ ಕ್ರಾಸ್ತಾ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |
December 28, 2024
7:25 AM
by: ದ ರೂರಲ್ ಮಿರರ್.ಕಾಂ
ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಕಾದಂಬರಿ | ರಾಜ್ಯಪಾಲರಿಂದ ಬಿಡುಗಡೆ |
December 9, 2024
6:47 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror