ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

August 27, 2019
10:51 PM

ಕಾಣಿಯೂರು:ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಸೆ.2,  ಮತ್ತು 3 ರಂದು ನಡೆಯಲಿದೆ.

Advertisement

ಸೆ.02ನೇ ಸೋಮವಾರ ಬೆಳಿಗ್ಗೆ ಮಹಾಗಣಪತಿ ಪ್ರತಿಷ್ಠೆ ನಡೆದು ನಂತರ ಸಾರ್ವಜನಿಕ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನದ ನಂತರ ಚುಕ್ಕಿ ರಂಗೋಲಿ ಸ್ಪರ್ಧೆ, ಗಣಪತಿ ದೇವರ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ, ಚೀಟಿ ಎತ್ತಿ ಅಭಿನಯ ಮತ್ತು ಆಶುಬಾಷಣ ಸ್ಪರ್ಧೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮ,ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಸಾಂದಿಪನಿ ವಿದ್ಯಾಸಂಸ್ಥೆಯ ಶಿಕ್ಷಕರಾದ ಶ್ರೀಪ್ರಸಾದ್ ಧಾರ್ಮಿಕ ಭಾಷಣ ಮಾಡಲಿದ್ದು, ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಗೌರವ ಅಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ವಹಿಸಲಿದ್ದಾರೆ. ನಂತರ ರಾತ್ರಿ 12ರ ತನಕ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸೆ 03ರ ಮಂಗಳವಾರ ದಂದು ಬೆಳಿಗ್ಗೆ ಮಹಾಪೂಜೆ, ಗಣಹೋಮ ನಡೆದು ನಂತರ ವಿಷ್ಣು ಪ್ರಿಯ ಭಜನಾ ಮಂಡಳಿ ಕಾಣಿಯೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ನಂತರ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಮಹಾಪೂಜೆ ನಡೆದು ವಿಗ್ರಹ ವಿಸರ್ಜನಾ ಮೆರವಣಿಗೆ ಭಜನಾ ಮಂದಿರದಿಂದ ಹೊರಟು ಕೂಡುರಸ್ತೆಗಾಗಿ ಕಾಣಿಯೂರಿನ ಪ್ರಮುಖ ರಸ್ತೆಯಲ್ಲಿ ಸಾಗಿ ಕಜೆ ಬಾಗಿಲು ಎಂಬಲ್ಲಿ ಜಲಸ್ತಂಭನ ಗೊಳ್ಳಲಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ
June 25, 2025
6:32 AM
by: The Rural Mirror ಸುದ್ದಿಜಾಲ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group