ಕಾವೇರಿ ನಾಡಿಗೆ ಮುಂಗಾರು ಹನಿ ಸಿಂಚನ

June 11, 2019
1:30 PM

ಮಡಿಕೇರಿ: ಕಾವೇರಿನಾಡು ಕೊಡಗಿನಲ್ಲಿ ಮುಂಗಾರು ಹನಿ ಸಿಂಚನವಾಗಿದೆ. ಹವಾಮಾನ ಇಲಾಖೆಯ ಪೂರ್ವ ಸೂಚನೆಗೆ ಪೂರಕವೆಂಬಂತೆ  ಮೋಡ ಕವಿದ ಮಂಜಿನ ವಾತಾವರಣದೊಂದಿಗೆ, ನಿರಂತರವಾಗಿ ಹನಿ ಮಳೆ ಕಾಣಿಸಿಕೊಂಡಿದ್ದು, ಮಳೆಗಾಲದ ವಾತಾವರಣ ಅನಾವರಣಗೊಂಡಿದೆ.

Advertisement
Advertisement
Advertisement

ನೆರೆಯ ಕೇರಳಕ್ಕೆ ಇದೇ ಜೂ.6 ರಂದು ನೈಋತ್ಯ ಮಾರುತಗಳ ಪ್ರವೇಶದಿಂದ ಅಧಿಕೃತವಾಗಿ ಮಳೆಗಾಲ ಆರಂಭವಾಗಿದ್ದು, ಹವಾಮಾನ ಇಲಾಖೆ ಕೊಡಗು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿತ್ತು. ಅದರ ಪ್ರಕಾರ ದಟ್ಟ ಮೋಡಗಳು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹನಿಮಳೆಗೆ ಕಾರಣವಾಗಿರುವುದರಿಂದ, ಉರಿಬಿಸಿಲ ಬೇಗೆ ಮರೆಯಾಗಿ ತಣ್ಣನೆಯ ವಾತಾವರಣ ಮನೆ ಮಾಡಿದೆ.

Advertisement

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂಗಾರು ಮಾರುತಗಳು ಕ್ಷೀಣಗೊಂಡಿರುವ ಕಾರಣದಿಂದ ತುಂತುರು ಮಳೆ ಕಾಣಿಸಿಕೊಂಡಿದೆ. ಮುಂದಿನ ಒಂದೆರಡು ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೆ ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಯ ವಾತಾವರಣ ಕಂಡು ಬಂದಿರುವುದರಿಂದ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರು ಕೊಡೆ, ರೈನ್‍ಕೋಟ್‍ಗಳೊಂದಿಗೆ ತೆರಳುತ್ತಿರುವ ದೃಶ್ಯ ಮಳೆಗಾಲಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ಕೊಡಗಿನಲ್ಲಿ ಜೂನ್ ತಿಂಗಳ ಮಳೆಯೊಂದಿಗೆ ಭತ್ತದ ಕೃಷಿ ಚಟುವಟಿಕೆಗಳು, ತೋಟಗಳಲ್ಲಿ ಕಾಫಿ ಗಿಡಗಳಿಗೆ ಗೊಬ್ಬರವನ್ನು ನೀಡುವ ಕಾರ್ಯ ಚುರುಕುಗೊಳ್ಳಲಿದೆ. ಇಲ್ಲಿಯವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಿತ್ತಾದರು, ಮಳೆಗಿಂತಲೂ ಹೆಚ್ಚಿನ ಬಿಸಿಲಿನ ಕಾವು ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿತ್ತು.

Advertisement

ಜನತೆಯಲ್ಲಿ ಮಳೆಗಾಲದ ಹರ್ಷದೊಂದಿಗೆ ಕಳೆದ ವರ್ಷದ ಮಳೆಹಾನಿಯ ಕಹಿ ಅನುಭವವು ತಳುಕು ಹಾಕಿಕೊಳ್ಳತೊಡಗಿದೆ. ಈ ಬಾರಿಯ ವರ್ಷಾಧಾರೆ ಮತ್ತೆ ಅಂತಹದ್ದೇ ವಿಕೋಪಗಳಿಗೆ ಕಾರಣವಾಗದಿರಲಿ ಎಂದು ಜನತೆ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

 

Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

6,100 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ | ದೇಶದಲ್ಲಿ ಅಭಿವೃದ್ಧಿ ಪರಿಕಲ್ಪನೆಗೆ ಹೊಸ ವೇಗ
October 21, 2024
7:26 PM
by: ದ ರೂರಲ್ ಮಿರರ್.ಕಾಂ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ
ಕೊಟ್ಟಿಗೆಯಲಿ ತುಂಬಿ ತುಳುಕುವ ಹಸು ಕರುಗಳು : ವೃದ್ಧಾಪ್ಯದಲ್ಲೂ ಮಲೆನಾಡು ಗಿಡ್ಡ ತಳಿ ಹಸು ಸಾಕುತ್ತಿರುವ ಅಜ್ಜಿ : ಬತ್ತದ ಜೀವನ ಉತ್ಸಾಹ
May 5, 2024
8:45 PM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror