‘ಕಿನಾದಿ’ ಬ್ಯಾರಿ ಗಝಲ್ ಸಿಡಿ ಬಿಡುಗಡೆ

June 25, 2019
10:39 AM

ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಪೆರ್ನಾಲ್ ಸಂದೋಲ’ ಮತ್ತು ‘ಕಿನಾದಿ’ ಬ್ಯಾರಿ ಗಝಲ್ ಬಿಡುಗಡೆ ಮಾಡಲಾಯಿತು.

Advertisement

ಈ ಸಂದರ್ಭ ಮಾತನಾಡಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಅಕಾಡೆಮಿಗಳ ಅನುದಾನವನ್ನು 70 ಲಕ್ಷ ರೂ.ನಿಂದ ಒಂದು ಕೋಟಿ ರೂ.ಗೆ ಹೆಚ್ಚಿಸಲು ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಮುಂದಿನ ಬಜೆಟ್ನಲ್ಲಿ ಘೋಷಣೆ ನಿರೀಕ್ಷೆ ಇದೆ ಎಂದು  ಹೇಳಿದರು. ಒಂದು   ಕಾಲದಲ್ಲಿ ಬ್ಯಾರಿ ಕ್ಯಾಸೆಟ್ ಬಿಡುಗಡೆ ಮಾಡಲು ಹಣವೂ ಇಲ್ಲದೆ, ಜಾಗವೂ ಇಲ್ಲದೆ ಕಷ್ಟಪಡುವ ಪರಿಸ್ಥಿತಿ ಇತ್ತು. ನಂತರ ಬ್ಯಾರಿ ಸಾಹಿತ್ಯ ಪರಿಷತ್ ಮತ್ತಿತರ ಸಂಘಟನೆಗಳ ಮೂಲಕ ಸುಧಾರಣೆ ಆಯಿತು. ಈಗ ಅಕಾಡೆಮಿ ನೇತೃತ್ವದಲ್ಲಿ ಹಲವು ಅತ್ಯುತ್ತಮ ಕಾರ್ಯಕ್ರಮ ಆಗುತ್ತಿವೆ. ಬ್ಯಾರಿ ಗಝಲ್ ಮೂಲಕ ಬ್ಯಾರಿ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಮೈಲುಗಲ್ಲು ತಲುಪಿದಂತಾಗಿದೆ. ಸಂಗೀತಕ್ಕೆ ಜಾತಿ, ಧರ್ಮದ ಹಂಗಿಲ್ಲ. ಕೊಡುಕೊಳ್ಳುವಿಕೆ ಮೂಲಕ ಸಾಹಿತ್ಯ ಕ್ಷೇತ್ರ ವಿಸ್ತಾರಗೊಳ್ಳಬೇಕು ಎಂದು ಸಚಿವರು ಹೇಳಿದರು.

ಬ್ಯಾರಿ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮದ್ ಅಧ್ಯಕ್ಷತೆ ವಹಿಸಿ, ಒಂದೂವರೆ ವರ್ಷದಲ್ಲಿ ಅಕಾಡೆಮಿ ಗುಣಮಟ್ಟದ ಕಾರ್ಯಕ್ರಮಗಳನ್ನು ನೀಡಿದೆ. ಇಂದು ಗಝಲ್ ಸಿಡಿ ಬಿಡುಗಡೆ ಮಾಡಿದ್ದು, ಇನ್ನೊಂದು ಮಹತ್ವದ ಯೋಜನೆಯಾಗಿ ಬ್ಯಾರಿ ವ್ಯಾಕರಣ ಗ್ರಂಥ ಶೀಘ್ರ ಬಿಡುಗಡೆ ಮಾಡಲಿದೆ ಎಂದರು.

ಕೆನರಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಪಿ.ಬಿ.ಅಬ್ದುಲ್ ಹಮೀದ್, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ಜಗದೀಶ್ ಶೆಟ್ಟಿ, ಬಂಟ್ವಾಳ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಅಬ್ಬಾಸ್ ಅಲಿ, ಗಾಯಕ ಮುಹಮ್ಮದ್ ಹನೀಫ್ ಉಪ್ಪಳ ಶುಭ ಹಾರೈಸಿದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ., ಗಾಯಕ ಠಾಗೂರ್ ದಾಸ್ ಉಪಸ್ಥಿತರಿದ್ದರು.

ಸಿಡಿ ನಿರ್ಮಾಣದ ಕಲಾವಿದರಾದ ಮುಹಮ್ಮದ್ ಬಡ್ಡೂರು, ಠಾಗೂರ್ ದಾಸ್, ಪದ್ಮಿನಿ ನಾಯಕ್, ಸುಹೈಲ್ ಬಡ್ಡೂರ್, ಪುರುಷೋತ್ತಮ್ ಕೊಪ್ಪಲ್, ಶಿನೋಯ್ ವಿ.ಜೋಸೆಫ್ ಮತ್ತಿತರರನ್ನು ಸನ್ಮಾನಿಸಲಾಯಿತು.

Advertisement

ಬ್ಯಾರಿ ಅಕಾಡೆಮಿ ಸದಸ್ಯ ಬಶೀರ್ ಬೈಕಂಪಾಡಿ ಸ್ವಾಗತಿಸಿದರು. ಬಹುಭಾಷಾ ಸಾಹಿತಿ ಮುಹಮ್ಮದ್ ಬಡ್ಡೂರು ಪ್ರಾಸ್ತಾವಿಕ ಮಾತನಾಡಿದರು. ಸದಸ್ಯ ಮುಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಹುಸೈನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಠಾಗೂರ್ ದಾಸ್ ಅವರಿಂದ ಬ್ಯಾರಿ ಗಝಲ್ ಕಾರ್ಯಕ್ರಮ ನಡೆಯಿತು.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group