ಕಿಸಾನ್ ಸಮ್ಮಾನ್ ನಿಧಿ : ಅವಧಿ ವಿಸ್ತರಣೆಗೆ ಮನವಿ

June 25, 2019
12:00 PM

ಮಡಿಕೇರಿ  : ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭ ಪಡೆಯಲು ರೈತರಿಗೆ ಅರ್ಜಿ ಸಲ್ಲಿಸಲು ಜೂ.25 ಕೊನೆಯ ದಿನವೆಂದು ತಿಳಿಸಲಾಗಿದೆ. ಆದರೆ ಈ ಅಲ್ಪಾವಧಿಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ರೈತರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಇರುವುದರಿಂದ ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡಬೇಕೆಂದು ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಮಂಡುವಂಡ ಬಿ.ಜೋಯಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ  ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ಆರು ಸಾವಿರ ರೂಪಾಯಿಗಳನ್ನು ಪ್ರತಿ 4 ತಿಂಗಳಿಗೊಮ್ಮೆ ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಕೃಷಿ ಇಲಾಖೆ ತಿಳಿಸಿದೆ. ಆದರೆ ಅರ್ಜಿ ಸಲ್ಲಿಕೆಗೆ ಅಲ್ಪಾವಧಿಯನ್ನು ನೀಡಿದ್ದು, ಇದರಿಂದ ತಾಲ್ಲೂಕು ಕಚೇರಿ ಸೇರಿದಂತೆ ಎಲ್ಲಾ ರೈತ ಸೇವಾ ಕೇಂದ್ರಗಳಲ್ಲಿ ನೂಕುನುಗ್ಗಲು ಕಂಡು ಬಂದಿದೆ. ಅಲ್ಲದೆ ಅಗತ್ಯ ದಾಖಲೆಗಳನ್ನು ಕ್ರೋಢೀಕರಿಸಲು ಕಾಲಾವಕಾಶ ಬೇಕಾಗಿದೆ.
ಆದ್ದರಿಂದ ಅರ್ಹ ರೈತರಿಗೆ ಈ ಮಹತ್ವಾಕಾಂಕ್ಷೆಯ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಕೆಗೆ ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡಬೇಕು. ಆ ಮೂಲಕ ರೈತರು ಸೌಲಭ್ಯದಿಂದ ವಂಚಿತರಾಗುವುದನ್ನು ತಪ್ಪಿಸಬೇಕೆಂದು ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಗೆ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ
April 28, 2024
12:20 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror