ಸುಬ್ರಹಣ್ಯ: ಪುಣ್ಯ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸ್ಕಂಧ ಪಂಚಮಿಯ ದಿನವಾದ ಆದಿತ್ಯವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 399 ಭಕ್ತರು ಎಡೆಸ್ನಾನ ಸೇವೆಗೈದರು.
Advertisement
ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಪಂಚಮಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು. ಷಷ್ಠಿಯ ದಿನವಾದ ಸೋಮವಾರ ಕೂಡಾ ಎಡೆಸ್ನಾನ ಸೇವೆಯನ್ನು ಭಕ್ತರು ನೆರವೇರಿಸಲಿದ್ದಾರೆ.
Advertisement
ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ಯತೀಶ್ ಉಳ್ಳಾಲ್, ಆಗಮ ಪಂಡಿತರು, ಶ್ರೀ ದೇವಳದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥ್ ನಂಬೀಶ ಮತ್ತು ದೇವಳದ ಸಿಬ್ಬಂಧಿಗಳು ಉಪಸ್ಥಿತರಿದ್ದರು.ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ ಅವರ ನೇತೃತ್ವದಲ್ಲಿ ಪೋಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement