ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾಧಿಕಾರಿ ಭೇಟಿ – ಚಂಪಾ ಷಷ್ಠಿ ಸಿದ್ಧತೆಗಳ ಪರಿಶೀಲನೆ

November 27, 2019
6:14 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭೇಟಿ ನೀಡಿ ಸಿದ್ಧತಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ದೇವಸ್ಥಾನದಲ್ಲಿ  ರಂಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಿದ್ಧತೆಗಳ ಮಾಹಿತಿ ಪಡೆದು ಸೂಕ್ತ ನಿರ್ದೇಶನಗಳನ್ನು ನೀಡಿದರು.

Advertisement
Advertisement

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,  ಚಂಪಾ ಷಷ್ಠಿ ಮಹೋತ್ಸವದ ಯಶಸ್ಸಿಗೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಪೊಲೀಸ್ ಭದ್ರತೆ ಹಾಗೂ  ಭದ್ರತೆ ದೃಷ್ಟಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ, ಕಳೆದ ಬಾರಿಗಿಂತ ಈ ಬಾರಿ 200 ಪೊಲೀಸರನ್ನು ಹೆಚ್ಚುವರಿಯಾಗಿ ನಿಯೋಜನೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು. ಇದುವರೆಗೆ 70 ಜನ ಬ್ರಹ್ಮರಥ ಸೇವಾರ್ಥಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು.

ಪಾರ್ಕಿಂಗ್ ವ್ಯವಸ್ಥೆ: 

ಜಾತ್ರಾ ಉತ್ಸವಕ್ಕೆ ವಾಹನಗಳ ಸೂಕ್ತ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದ್ದು  ಸರಕಾರಿ ಬಸ್ ಗಳಿಗೆ ಕುಮಾರಧಾರ ಮತ್ತು ಇಂಜಾಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಉಚಿತವಾಗಿ ಮಿನಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.ಇತರ ವಾಹನಗಳಿಗೆ ಅಲ್ಲಲ್ಲಿ  ವ್ಯವಸ್ಥೆ ಮಾಡಲಾಗಿದೆ ಎಂದರು. 

Advertisement

ಈ ಸಂದರ್ಭ ದೇವಸ್ಥಾನದ ಆಡಳಿತಾಧಿಕಾರ, ಅಪರ ಜಿಲ್ಲಾಧಿಕಾರಿ ರೂಪಾ,  ಕಾರ್ಯ ನಿರ್ವಹಣಾಧಿಕಾರಿಯಾಗಿ, ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ , ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group