ಕುಮಾರಪರ್ವತ ಚಾರಣ ವೇಳೆ ಯುವಕ ನಾಪತ್ತೆ : 5 ತಂಡದಿಂದ ಹುಡುಕಾಟ ಆರಂಭ

September 17, 2019
10:56 AM

ಸುಬ್ರಹ್ಮಣ್ಯ: ಕುಮಾರಪರ್ವತ ಚಾರಣಕ್ಕೆ ಹೋದ 12 ಜನ  ಯುವಕರ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ 25 ವರ್ಷದ ಯುವಕ ಸಂತೋಷ್  ಭಾನುವಾರ ಸಂಜೆ ನಾಪತ್ತೆಯಾಗಿದ್ದಾರೆ. ಇದೀಗ ಹುಡುಕಾಟ ಆರಂಭವಾಗಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳ 5 ತಂಡ ಹುಡುಕಾಟ ಆರಂಭಿಸಿದೆ. 5 ತಂಡಗಳು ಪರ್ವತದ ಬೇರೆ ಬೇರೆ ಕಡೆಗಳಲ್ಲಿ ಹುಡುಕಾಟ ಆರಂಭಿಸಿದೆ. ಸ್ಥಳಿಯರೂ ಜೊತೆ ಸೇರಿದ್ದಾರೆ.

Advertisement
Advertisement

ಬೆಂಗಳೂರಿನ 12 ಜನರ ಚಾರಣಿಗರ ತಂಡವು ಶನಿವಾರ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಮಾರಪರ್ವತಕ್ಕೆ ಚಾರಣ ಬೆಳೆಸಿ ರಾತ್ರಿ ಗಿರಿಗದ್ದೆಯಲ್ಲಿ  ವಾಸ್ತವ್ಯ ಹೂಡಿ ಭಾನುವಾರ ಬೆಳಗ್ಗೆ ಕುಮಾರಪರ್ವತ ಏರಿತ್ತು. ಮಧ್ಯಾಹ್ನದ ನಂತರ ವಾಪಾಸು ಗಿರಿಗದ್ದೆಗೆ ಬಂದು ಸಂಜೆ ಸುಬ್ರಹ್ಮಣ್ಯದ ಕಡೆಗೆ ಪ್ರಯಾಣ ಬೆಳೆಸಿತ್ತು. 12 ಜನರ ತಂಡದಲ್ಲಿದ್ದವರು ಸುಸ್ತಾದ್ದರಿಂದ ತಂಡ ತಂಡವಾಗಿ ನಡೆದುಕೊಂಡು ಬರುತ್ತಿದ್ದರು. 5 ಮಂದಿ ಮುಂದೆ ಹಾಗೂ ಆ ನಂತರ 6 ಜನ ಹಾಗೂ ನಡುವೆ ನಾಪತ್ತೆಯಾದ ಸಂತೋಷ್ ಒಬ್ಬರೇ ಬರುತ್ತಿದ್ದರು. ಮಳೆ ಸುರಿದ ಹಿನ್ನೆಲೆಯಲ್ಲಿ  ಜಾಕೆಟ್ ಬದಲಿಸಲೆಂದು ನಿಂತಿದ್ದವರು ಬಳಿಕ ಪತ್ತೆಯಾಗಲಿಲ್ಲ ಎಂದು ತಂಡದ ಸದಸ್ಯರು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ಬೆಳ್ಳಾರೆ ,ಸುಳ್ಯ , ಸುಬ್ರಹ್ಮಣ್ಯ ಹಾಗೂ ಪುತ್ತೂರು ಪೊಲೀಸರ ತಂಡ ಹಾಗೂ ಅರಣ್ಯ ಇಲಾಖೆಯ ಸಿಬಂದಿಗಳ ತಂಡ ಪರ್ವತದ ವಿವಿಧ ಕಡೆಗಳಲ್ಲಿ  ಹುಡುಕಾಟ ಆರಂಭಿಸಿದೆ. ಇದುವರೆಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ. ಸುಬ್ರಹ್ಮಣ್ಯ ಗ್ರಾಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಸೇರಿದಂತೆ ಸ್ಥಳೀಯರು ಜೊತೆಗಿದ್ದಾರೆ.

Advertisement

 

ಇದುವರೆಗೆ ಸುಬ್ರಹ್ಮಣ್ಯದಿಂದ ಗಿರಿಗದ್ದೆಯವರೆಗೆ ಯಾವುದೇ ಕಾಡುಪ್ರಾಣಿಗಳಿಂದ ಹಾಗೂ ಇತರ ಯಾವುದೇ ಸಮಸ್ಯೆ ಆದದ್ದಿಲ್ಲ. ಗಿರಿಗದ್ದೆಗೆ ತಡರಾತ್ರಿ ಕೂಡಾ ನಡೆದುಕೊಂಡು ಹೋಗುತ್ತಾರೆ. ಹೀಗಾಗಿ ಈ ಯುವಕರ ತಂಡದ ಯುವಕ  ದಾರಿ ತಪ್ಪಿ ಹೋಗಿರಬಹುದೇ ಅಥವಾ ಇನ್ನೇನಾದರೂ ಕಾರಣ ಇದೆಯೇ ಎಂಬ ಸಂದೇಹವೂ ಈಗ ಇದೆ.

 

 

Advertisement

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?
July 24, 2025
11:54 AM
by: ಸಾಯಿಶೇಖರ್ ಕರಿಕಳ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ನಿಮ್ಮ ಆರೋಗ್ಯವನ್ನು ಪುನರುಜ್ಜೀವನಗೊಳಿಸಿ | 10 ಆಶ್ಚರ್ಯಕರ ಆಯುರ್ವೇದ ಉಪಾಯಗಳು !
July 24, 2025
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group