ಕುಲ್ಕುಂದ ಜಾನುವಾರ ಜಾತ್ರೆ ಈಗ ಸಾಂಕೇತಿಕ…!

November 13, 2019
2:27 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಲ್ಕುಂದ ಜಾನುವಾರು ಜಾತ್ರೆ ಭಾರೀ ಪೇಮಸ್ಸಾಗಿತ್ತು. ಈಗ ಸಾಂಕೇತಿಕವಾಗಿ ನಡೆಸುವ ಹಂತಕ್ಕೆ ಬಂದಿದೆ. ಸಂಪ್ರದಾಯದ ಪ್ರಕಾರ ಕಾರ್ತಿಕ ಹುಣ್ಣಿಮೆಯ ದಿನ ಜಾನುವಾರು ಜಾತ್ರೆ ಆರಂಭವಾಗುತ್ತದೆ. ಈ ಸಂಪ್ರದಾಯದ ಪಾಲನೆ ಈಗಲೂ ನಡೆಯುತ್ತದೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಐತಿಹಾಸಿಕ ಕುಲ್ಕುಂದದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು.

ಅದ್ದೂರಿಯಾಗಿ ನಡೆಯುತ್ತಿದ್ದ ಜಾನುವಾರು ಜಾತ್ರೆಯು ಕುಲ್ಕುಂದ ಜಾತ್ರೆ ಎಂದೇ ಕರೆಯಲಾಗುತ್ತಿತ್ತು. ಸಾವಿರಾರು ಜಾನುವಾರುಗಳು ಈ ಜಾತ್ರೆಗೆ ಆಗಮಿಸುತ್ತಿತ್ತು. ಘಟ್ಟ ಪ್ರದೇಶದಿಂದ ಜಾನುವಾರುಗಳು ಬಂದರೆ ಕೇರಳ ಹಾಗೂ ಕರಾವಳಿ ಪ್ರದೇಶಗಳ ಕೃಷಿಕರು ಜಾನುವಾರು ಖರೀದಿ ಮಾಡುತ್ತಿದ್ದರು. ಆದರೆ ಈಚೆಗೆ ಕಳೆದ ಕೆಲವು ವರ್ಷಗಳಿಂದ ಜಾನುವಾರುಗಳು ಸಂಖ್ಯೆ ಕಡಿಮೆಯಾಗಿತ್ತು.

ಮಂಗಳವಾರ  ಜಾನುವಾರು ಜಾತ್ರೆ ಪ್ರಯುಕ್ತ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಐತಿಹಾಸಿಕ ಕುಲ್ಕುಂದದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು. ಕಾರ್ತಿಕ ಹುಣ್ಣಿಮೆಯ ದಿನವಾದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಕುಲ್ಕುಂದ ಪರಿಸರದ ಸುಮಾರು 10 ಕ್ಕೂ ಅಧಿಕ ಗೋವುಗಳಿಗೆ ಪುಷ್ಪಾಂಲಂಕಾರ ಮಾಡಿ ಕರೆತರಲಾಗಿತ್ತು. ಬಸವೇಶ್ವರ ದೇವಳದ ಅರ್ಚಕ ಗಣೇಶ್ ದೀಕ್ಷಿತ್ ವಿವಿಧ ವೈದಿಕ ವಿದಿ ವಿಧಾನಗಳ ಮೂಲಕ ಗೋವುಗಳಿಗೆ ಗೋಪೂಜೆ ನೆರವೇರಿಸಿ, ಗೋಗ್ರಾಸ ನೀಡಿದರು. ಬಳಿಕ ಬಸವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಜಾನುವಾರುಗಳನ್ನು ಕಟ್ಟುವ ಮೂಲಕ ಸಂಪ್ರದಾಯದಂತೆ ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ದೇವಳದ ಅಭಿಯಂತರ ಉದಯ ಕುಮಾರ್, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಕಾರ್ಯನಿರ್ವಹಣಾಧಿಕಾರಿ ಹರೀಶ್, ಕುಲ್ಕುಂದ ಬಸವೇಶ್ವರ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸ್ಕಂಧ, ಕಾರ್ಯದರ್ಶಿ ನಾರಾಯಣ ಅಗ್ರಹಾರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎನ್.ಕೆ.ಮನೋಹರ ನಾಳ, ಸುಬ್ರಹ್ಮಣ್ಯ ಗ್ರಾ.ಪಂ.ಉಪಾಧ್ಯಕ್ಷ ರಾಜೇಶ್ ಎನ್.ಎಸ್, ಸದಸ್ಯರಾದ ದಿನೇಶ್ ಬಿ.ಎನ್, ಹರೀಶ್ ಇಂಜಾಡಿ, ಮಾಸ್ಟರ್ ಪ್ಲಾನ್ ಸಮಿತಿಯ ಮಾಜಿ ಸದಸ್ಯ ಶಿವರಾಮ ರೈ, ಬಸವೇಶ್ವರ ದೇವಸ್ಥಾನದ ಆಡಳಿತ ಸಮಿತಿ ಸದಸ್ಯರಾದ ರವೀಂದ್ರ ಕುಮಾರ್ ರುದ್ರಪಾದ, ರಾಜೇಶ್ ಕುಲ್ಕುಂದ, ಶಿವರಾಮ ಪಳ್ಳಿಗದ್ದೆ, ವೆಂಕಟ್ರಮಣ ಗೌಡ ಕಳಿಗೆ, ಶೀನಪ್ಪ ಗೌಡ, ಬಾಲಕೃಷ್ಣ ಟೈಲರ್ ಕುಲ್ಕುಂದ, ಚಂದ್ರಶೇಖರ ಬಸವನಮೂಲೆ, ಗಿರೀಶ್ ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಗುಡ್ಡಪ್ಪ ಗೌಡ ಬೀಡಿನಗದ್ದೆ, ನಾಗೇಶ್ ಕೈಕಂಬ, ಬೆಳ್ಯಪ್ಪ ಪಳ್ಳಿಗದ್ದೆ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror