ಸುಳ್ಯ: ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಶುಕ್ರವಾರ ಸಂಜೆ ಜಾಲ್ಸೂರಿನಲ್ಲಿ ನಡೆದಿದೆ.
ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕೇರಳ ಆರ್.ಟಿ.ಸಿ. ಬಸ್ ಮತ್ತು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಯಾರೂ ಗಾಯಗೊಂಡಿಲ್ಲ. ಕಾರಿನ ಮುಂಭಾಗ ನುಜ್ಜು ಗುಜ್ಜಾಗಿದೆ. ಅಪಘಾತದಿಂದ ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಯಿತು.ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಶೀಲನೆ ನಡೆಸಿದ್ದಾರೆ. ವಾಹನ ಸಂಚಾರವನ್ನು ಸುಗಮಗೊಳಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel