ಕೊಚ್ಚಿ: ಕೇರಳ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಮಂಜೇಶ್ವರ ಕ್ಷೇತ್ರದ ಯುಡಿಎಫ್ ಶಾಸಕ ಎಂ. ಸಿ ಕಮರುದ್ದೀನ್ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕನ್ನಡಿಗರ ಗಮನ ಸೆಳೆದಿದ್ದಾರೆ.
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಎಂ.ಸಿ ಕಮರುದ್ದೀನ್ ಚೊಚ್ಚಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಆಯ್ಕೆಯಾದ ಐವರು ನೂತನ ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ವಿ.ಕೆ.ಪ್ರಶಾಂತ್, ಕೆ.ಯು.ಜೆನಿಶ್ ಕುಮಾರ್, ಟಿ.ಜೆ.ವಿನೋದ್, ಶನಿಮೋಲ್ ಉಸ್ಮಾನ್ ಮತ್ತು ಕಮರುದ್ದೀನ್ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರ ಸಮ್ಮುಖದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಮರುದ್ದೀನ್ ಅವರು ಕನ್ನಡದಲ್ಲಿ ಹಾಗೂ ಇತರ ನಾಲ್ವರು ಶಾಸಕರು ಮಲಯಾಳಂ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಡಿ ಜಿಲ್ಲೆ ದಕ್ಷಿಣ ಕನ್ನಡ ಮತ್ತು ಇಡೀ ರಾಜ್ಯದ ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel