ಕೊಡಿಮಾರು, ಅಬೀರ ಗೆಳೆಯರ ಬಳಗದಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

September 30, 2019
2:10 PM

ಕಾಣಿಯೂರು: ರಕ್ತದಾನ ಮಾಡುವ ಮೂಲಕ ಎಷ್ಟೋ ಜೀವಗಳನ್ನು ಉಳಿಸಲು ಸಾಧ್ಯವಿದೆ. ರಕ್ತದಾನ ಮಾಡಿದರೆ ಮನಸ್ಸು ತೃಪ್ತಿ, ನೆಮ್ಮದಿಯಿಂದ ಇರುತ್ತದೆ. ರಕ್ತದಾನ ಮಾಡುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಂಘ ಸಂಸ್ಥೆಗಳು ಆದ್ಯತೆ ನೀಡಬೇಕಾಗಿದೆ ಎಂದು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಹೇಳಿದರು.

ಅವರು ಕೊಡಿಮಾರು ಅಬೀರ ಗೆಳೆಯರ ಬಳಗದ ದಶವರ್ಷದ ಪ್ರಯುಕ್ತ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ, ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಯೋಗದೊಂದಿಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ  ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕೊಡಿಮಾರು ದೈವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಉದಯ ರೈ ಮಾದೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘಟನೆಗಳ ಮೂಲಕ ಸಮಾಜಮುಖಿ, ಮೌಲ್ಯಯುತವಾದ ಕೆಲಸಗಳಲ್ಲಿ ತೊಡಗಿಸಿಕೊಂಡಾಗ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯವಿದೆ ಎಂದರು.

ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಇಲ್ಲಿಯ ವೈದ್ಯಾಧಿಕಾರಿ ಡಾ| ರಾಮಚಂದ್ರ ಭಟ್ ಮಾಹಿತಿ ನೀಡಿದರು. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ಗಿರಿಶಂಕರ ಸುಲಾಯ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಬೆಳಂದೂರು ‘ಬಿ’ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ ಕಳುವಾಜೆ ಶುಭಹಾರೈಸಿದರು. ಗೆಳೆಯರ ಬಳಗದ ಅಧ್ಯಕ್ಷ ಪ್ರಮೋದ್ ನೀರಜರಿ ಉಪಸ್ಥಿತರಿದ್ದರು.

ಗೆಳೆಯರ ಬಳಗದ ಗೌರವ ಸಲಹೆಗಾರರಾದ ಜಯಂತ ಅಬೀರ ಸ್ವಾಗತಿಸಿ, ವಸಂತ ರೈ ಕಾರ್ಕಳ ವಂದಿಸಿದರು. ಕಾರ್ಯದರ್ಶಿ ರಂಜಿತ್ ಹೊಸೊಕ್ಲು ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror