ಮಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ಸತತ ಪ್ರಯತ್ನ ನಡೆಯುತ್ತಿದೆ. ಈ ಸಂದರ್ಭ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕಾದ್ದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ ಹಂತದಲ್ಲಿ ಜನರನ್ನು ಭಯಗೊಳಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣ, ವಾಟ್ಸಪ್ ಗ್ರೂಪುಗಳ ಮೂಲಕ ಹರಡಿದರೆ ಕೇಸು ದಾಖಲಾಗಲಿದೆ. ಹೀಗಾಗಿ ವಿಡಿಯೋಗಳನ್ನು ವೈರಲ್ ಮಾಡುವ ಮುನ್ನ ಎಚ್ಚರಿಕೆ ವಹಿಸುವುದು ಒಳಿತು.
Advertisement
ಮಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣ ಪತ್ತೆಯಾದ ಬೆನ್ನಲ್ಲೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇಂತಹ ವಿಡಿಯೋ ವೈರಲ್ ಮಾಡುವ ಮೂಲಕ ಜನರನ್ನು ಇನ್ನಷ್ಟು ಆತಂಕಕ್ಕೆ ಹಾಗೂ ಭಯಕ್ಕೆ ತಳ್ಳುವ ಸಾಧ್ಯತೆ ಇದೆ. ಹೀಗಾಗಿ ಈ ರೀತಿ ವದಂತಿ, ಅಪಪ್ರಚಾರ ಮಾಡುವುದರ ಬಗ್ಗೆ ಸಂಬಂಧಿತ ಅಧಿಕಾರಿಗಳು ಪೊಲೀಸ್ ದೂರು ನೀಡಲಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement