ಕೊರೊನಾ ವೈರಸ್ ಹರಡುವುದು ತಡೆಗೆ ಕೇಂದ್ರ ಸರಕಾರ ಎ.14 ರ ವರೆಗೆ ಲಾಕ್ ಡೌನ್ ಘೋಷಿಸಿದೆ. ಇದೀಗ ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟ ಮಾಡಿದ್ದು ದೇಶದ 80 ಕೋಟಿ ಜನರಿಗೆ ಪಡಿತರ ನೀಡಲಾಗುತ್ತದೆ ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಪ್ರಕಾಶ್ ಜಾವೇಡ್ಕರ್, ದೇಶದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ ಜಾರಿ ಮಾಡಲಾಗುತ್ತದೆ. 3 ತಿಂಗಳಿಗೆ ಬೇಕಾಗುವಷ್ಟು ಪಡಿತರ ನೀಡಲಾಗುತ್ತದೆ. ಸಹಕಾರಿ ಸಂಘಗಳಿಗೆ ಇದಕ್ಕಾಗಿ ಫಂಡ್ ನೀಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಗೋಧಿ್ಗೆ 2 ರೂಪಾಯಿ ಹಾಗೂ ಅಕ್ಕಿಗೆ 3 ರೂಪಾಯಿಗೆ ವಿತರಣೆ ಮಾಡಲಾಗುತ್ತದೆ. ಗುತ್ತಿಗೆ ಕಾರ್ಮಿಕರಿಗೆ ವೇತನ ಕಡಿತ ಮಾಡಬಾರದು ಎಂದು ಹೇಳಿದ್ದಾರೆ. ಈ ಸಂದರ್ಭ ಕಾಳಸಂತೆಯಲ್ಲಿ ದಿನಸಿ ವಸ್ತುಗಳನ್ನು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಹಣ ಪಡೆಯಲು ಯಾವುದೇ ಅಡ್ಡಿ ಇಲ್ಲ. ಎಟಿಎಂ ಮೂಲಕ ಪಡೆಯಬಹುದಾಗಿದೆ. ಇದಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ. ತುರ್ತು ಕೆಲಸ ಇದ್ದರೆ ಮಾತ್ರವೇ ಪೇಟೆಗೆ, ಬ್ಯಾಂಕ್ ಗೆ ತೆರಳಿ ಎಂದು ಸರಕಾರ ಹೇಳಿದೆ.