ಮಂಗಳೂರು: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಜನರಿಗೆ ಕಷ್ಟವಾಗಬಾರದು ಎಂಬ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸರಕಾರವು 3 ತಿಂಗಳು ವಿದ್ಯುತ್ ಬಿಲ್ ಕಟ್ಟುವಲ್ಲಿ ವಿನಾಯಿತಿ ನೀಡಲು ಕೇಂದ್ರ ಸರಕಾರವು ರಾಜ್ಯಗಳಿಗೆ ಸೂಚಿಸಿದೆ.
ಹಣ ಇಲ್ಲದೇ ಇದ್ದರೆ 3 ತಿಂಗಳು ಹಣ ಕಟ್ಟುವಂತೆ ಒತ್ತಾಯ ಹೇರಬಾರದು. ಇದರ ಜೊತೆಗೆ ವಿದ್ಯುತ್ ಸರಬರಾಜು ಮಾಡುವ ಕಂಪನಿಗಳು ಕೂಡಾ ಈ 3 ತಿಂಗಳು ಹಣ ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ. ಯಾವುದೇ ಭದ್ರತಾ ಠೇವಣಿ ಇಲ್ಲದೆ ವಿದ್ಯುತ್ ಖರೀದಿಸಬಹುದಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel