ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರ ಪಾಸಿಟಿವ್ ನ್ಯೂಸ್. ದಕ-ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಇಲ್ಲ. ಇದೇ ವೇಳೆ ಮೊದಲ ಕೊರೊನಾ ವೈರಸ್ ಸೋಂಕಿತ ಗುಣಮುಖರಾಗಿದ್ದು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ. ಹೀಗಾಗಿ ಜಿಲ್ಲೆಗೆ ಇದೆರಡೂ “ಪಾಸಿಟಿವ್ ನ್ಯೂಸ್”.
Advertisement
ಭಾನುವಾರ ಒಟ್ಟು 28 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದೆ. ಎಲ್ಲಾ ವರದಿಗಳು ನೆಗೆಟಿವ್. ಹೀಗಾಗಿ ನೆಮ್ಮದಿಯ ಭಾನುವಾರ.
Advertisement
ದುಬೈನಿಂದ ಬಂದಿದ್ದ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಮಾ.19 ರಂದು ಭಟ್ಕಳ ಮೂಲದ ವ್ಯಕ್ತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭ ಆತನಲ್ಲಿ ಕೊರೊನಾ ಸೋಂಕು ಲಕ್ಷಣಗಳು ದೃಢಪಟ್ಟಿತ್ತು. ತಕ್ಷಣ ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗುಣಮುಖನಾಗಿದ್ದು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement