ಕೊರೊನಾ ವೈರಸ್: ಆತಂಕ‌ ಬೇಡ, ಜಾಗ್ರತೆ ಇರಲಿ – ಸಚಿವ ಕೋಟ

February 6, 2020
10:07 AM

ಮಂಗಳೂರು: ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ರೋಗ ಹಬ್ಬಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಯಾವುದೇ ಭಯ, ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಆದರೆ, ಮುಂಜಾಗರೂಕತಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ತುರ್ತು ಸಭೆ ನಡೆಸಿ, ರಾಜ್ಯದಲ್ಲಿ ಈ ರೋಗದಿಂದ ಬಾಧಿತರಾದ ಯಾವುದೇ ಮಾಹಿತಿ ಇದುವರೆಗೆ ಇಲ್ಲ. ಆದರೂ, ದ.ಕ. ಜಿಲ್ಲೆಯ ಪಕ್ಕದ ಕೇರಳ ರಾಜ್ಯದಲ್ಲಿ ಇದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಾರ್ವಜನಿಕರು ಯಾವುದೇ ಸಂಶಯ,ಮಾಹಿತಿ‌ ಹಾಗೂ ನೆರವಿಗೆ ಆರೋಗ್ಯ ಇಲಾಖೆಯ ಸಹಾಯವಾಣಿ 104 ಕ್ಕೆ ಕರೆ ಮಾಡಬಹುದು. ಜಿಲ್ಲಾಡಳಿತವು ಸಂಪೂರ್ಣ ಸನ್ನದ್ಧವಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಜಿಲ್ಲೆಗೆ ಪ್ರಮುಖ ಪ್ರವೇಶ ಸ್ಥಳವಾಗಿರುವ ಏರ್ ಪೋಟ್೯, ರೈಲು ನಿಲ್ದಾಣಗಳಲ್ಲಿ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಚೀನಾದಿಂದ ಮಂಗಳೂರಿಗೆ ನೇರ ವಿಮಾನ ಯಾನ ಇಲ್ಲದೇ ಇರುವುದರಿಂದ ಕೊರೋನಾ ವೈರಸ್ ಹಂಚಿಕೆ ಬಗ್ಗೆ ಆತಂಕವಿಲ್ಲ. ಆದಾಗ್ಯೂ ವಿಶೇಷವಾಗಿ ಕೆಲ ದಿನ ಹಿಂದೆ ಚೀನಾದಿಂದ ಜಿಲ್ಲೆಗೆ ಬಂದ ಇಬ್ಬರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಯಾವುದೇ ರೋಗ ಲಕ್ಷಣ ಅವರಲ್ಲಿ ಕಂಡುಬಂದಿರುವುದಿಲ್ಲ ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾತನಾಡಿ, ವೆನ್ ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಚಿಕಿತ್ಸೆಗಾಗಿ 10 ವಿಶೇಷ ಹಾಸಿಗೆ ಸಿದ್ಧ‌ತೆಯಲ್ಲಿಡಲಾಗಿದೆ. ದಿನದ 24 ಗಂಟೆಯೂ ಇದರ ನಿರ್ವಹಣೆಗೆ ವೈದ್ಯರಿಗೆ, ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ ಎಂದರು.
ವಿಶ್ವ ಆರೋಗ್ಯ ಸಂಸ್ಥೆಯ ಡಾ. ಸತೀಶ್ಚಂದ್ರ ಮಾತನಾಡಿ, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಸೀನುವಾಗ ಕರವಸ್ತ್ರ ಹಿಡಿದಿಕೊಳ್ಳುವುದು ಈ ರೋಗ ನಿಯಂತ್ರಣದಲ್ಲಿ ಪ್ರಾಮುಖ್ಯ ವಾಗಿದೆ ಎಂದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಸಂಧ್ಯಾ, ಡಾ. ನವೀನ್ ಚಂದ್ರ, ಡಾ. ರಾಜೇಶ್, ವಿವಿಧ ಇಲಾಖಾಧಿಕಾರಿಗಳು, ಏರ್ ಪೋಟ್೯, ರೈಲ್ವೇ, ಎನ್.ಎಂ.ಪಿ.ಟ. ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror