ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ 1 ಪಾಸಿಟಿವ್ | ಕಾಸರಗೋಡಿನಲ್ಲಿ 2 ಪಾಸಿಟಿವ್ | ಸುಳ್ಯದಲ್ಲಿ ಮುಂಜಾಗ್ರತಾ ಕ್ರಮ |

March 31, 2020
8:37 PM

ಮಂಗಳೂರು/ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಂಗಳವಾರ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.  ಈ ಮೂಲಕ ರಾಜ್ಯದಲ್ಲಿ ಒಟ್ಟು101 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.  ಇದೇ ಸಂದರ್ಭ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದಂದು 2 ಪಾಸಿಟಿವ್ ಪ್ರಕರಣಗಳು  ದೃಢಪಟ್ಟಿವೆ. ಉಡುಪಿಯಲ್ಲಿ  ಯಾವುದೇ ಪ್ರಕರಣ ಕಂಡುಬಂದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸುಳ್ಯ ಮೂಲಕ ವ್ಯಕ್ತಿಯಾಗಿರುವ 34 ವರ್ಷದ ಯುವಕ ದುಬೈನಿಂದ ಆಗಮಿಸಿದ್ದ.  ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ಈ ಯುವಕ ಮಾ. 18 ರಂದು ವಿದೇಶದಿಂದ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭದಲ್ಲಿ ಕೊರೊನಾ ವೈರಸ್ ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋ ಕ್ವಾರಂಟೆನ್ ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾ.28 ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಪರೀಕ್ಷಾ ವರದಿ ಮಾ.31 ರ ಮಂಗಳವಾರ ಲಭ್ಯವಾಗಿದ್ದು ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಈ ಯುವಕ ಸದ್ಯ ಆರೋಗ್ಯವಾಗಿದ್ದ ಯಾವುದೇ ಆತಂಕವಿಲ್ಲ. ಚಿಕಿತ್ಸೆ ಮುಂದುವರಿದೆ.

ಮಂಗಳವಾರದಂದು ಒಟ್ಟು 41 ಮಂದಿ ಸ್ಕ್ರೀನಿಂಗ್ ಗೆ ಒಳಪಟ್ಟಿದ್ದು ಇದುವರೆಗೆ  5875 ಮಂದಿ ನಿಗಾದಲ್ಲಿದ್ದಾರೆ.

ಕಾಸರಗೋಡಿನಲ್ಲಿ  2  ಕೊರೊನಾ ವೈರಸ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ.

ಸುಳ್ಯದಲ್ಲಿ  ಮುಂಜಾಗ್ರತಾ ಕ್ರಮ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ದುಬೈಯಿಂದ ಆಗಮಿಸಿದ ಯುವಕನಿಗೆ ಕೊರೊನಾ ವೈರಸ್ ಪಾಸಿಟವ್ ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ  ಈ ಯುವಕನ ನೇರ ಸಂಪರ್ಕದಲ್ಲಿ ಇದ್ದವರನ್ನು  ಹಾಗೂ ಆತನ ಸಂಪರ್ಕದಲ್ಲಿದ್ದವರನ್ನು ಹೋಕ್ವಾರಂಟೇನ್ ಗೆ ಸಿದ್ಧತೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಸಿ್ದ್ಧತೆಗೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಸಿದ್ಧತೆ ನಡೆಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror